ಬೆಂಗಳೂರು :ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನದ ನಂತರ ರಾಜ್ಯದ ಅಲ್ಲಲ್ಲಿ ಕಲ್ಲು ತೂರಾಟ, ಟೈರ್ಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿದ್ದು ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
'ಕೈ' ಕಾರ್ಯಕರ್ತರ ಪ್ರತಿಭಟನೆ: ಸಿಎಂ ಭೇಟಿ ಮಾಡಿದ ಗೃಹ ಸಚಿವ ಬೊಮ್ಮಾಯಿ - CM Yadiyurappa
ಕಾಂಗ್ರೆಸ್ ಕಾರ್ಯಕರ್ತರು ರಾಜ್ಯವ್ಯಾಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಕಚೇರಿ ಕೃಷ್ಣಾಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು ಸಿಎಂ ಬಿ.ಎಸ್.ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಅವರು ವಿವರಿಸಿದ್ದಾರೆ.
ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಡಿಕೆ ಶಿವಕುಮಾರ್ ಬಂಧನದ ಬಳಿಕ ನಿನ್ನೆ ರಾತ್ರಿಯಿಂದ ಕೆಲವೆಡೆ ಪ್ರತಿಭಟನೆ ಮತ್ತು ಕಲ್ಲು ತೂರಾಟದಂತಹ ಪ್ರಕರಣಗಳು ನಡೆದಿವೆ. ಎಲ್ಲಾ ಕಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ. ಬೆಳಗ್ಗೆ ಕೂಡ ಅಲ್ಲಲ್ಲಿ ಕಲ್ಲು ತೂರಾಟ, ಟೈಗೆ ಬೆಂಕಿ ಹಚ್ಚಿರುವ ಘಟನೆಗಳು ನಡೆದಿದ್ದು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ ಎಂದರು.
ಸರ್ಕಾರದ ವತಿಯಿಂದ ಈವರೆಗೂ ಯಾರನ್ನೂ ಬಂಧಿಸಲು ಆದೇಶ ನೀಡಿಲ್ಲ. ಆದರೆ ಸಾಂದರ್ಭಿಕವಾಗಿ, ಸ್ಥಳೀಯವಾಗಿ ಬಂಧನ ಸಂಬಂಧ ಅಧಿಕಾರಿಗಳೇ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ರು.