ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಚೆನ್ನಾಗಿದೆ : ಗೃಹ ಸಚಿವ ಬೊಮ್ಮಾಯಿ ವಿಶ್ವಾಸದ ನುಡಿ

ಅಯೋಧ್ಯೆ ರಾಮ ಜನ್ಮಭೂಮಿ ವಿವಾದದ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ವರದಿಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

By

Published : Nov 9, 2019, 1:54 PM IST

ಬೆಂಗಳೂರು: ಅಯೋಧ್ಯೆ ರಾಮ ಜನ್ಮಭೂಮಿ ವಿವಾದದ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ವರದಿಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ

ಆರ್.ಟಿ ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ‌ನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸುವ್ಯವಸ್ಥೆ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ರಾಜ್ಯದಲ್ಲಿ ಸ್ಥಿತಿ ಗತಿ ಬಗ್ಗೆ ಪ್ರಾಥಮಿಕ ವರದಿಯನ್ನು ಸಿಎಂಗೆ ಸಲ್ಲಿಕೆ ಮಾಡಿದ್ದೇನೆ. ಬೆಂಗಳೂರಿನಲ್ಲಿಯೇ ಇದ್ದು ಎಲ್ಲವನ್ನೂ ಗಮನಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿಲು ಸಿಎಂ ಸೂಚನೆ ನೀಡಿದ್ದರು. ಅದರಂತೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಸಾಮಾಜಿಕ ಜಾಲತಾಣಗಳ ಮೇಲೆ ಸೈಬರ್​ ಕ್ರೈಂ ಇಲಾಖೆ ಅಧಿಕಾರಿಗಳು ನಿಗಾವಹಿಸಿದ್ದಾರೆ ಎಂದು ತಿಳಿಸಿದರು.

ಅಯೋಧ್ಯೆ ವಿವಾದದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದೆ. ಎಲ್ಲರಿಗೂ ಒಪ್ಪಿತ ತೀರ್ಪನ್ನು ಸುಪ್ರೀಂ ಪ್ರಕಟಿಸಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಚೆನ್ನಾಗಿದೆ. ಇದೇ ರೀತಿ ಶಾಂತಿ ಸೌಹಾರ್ದತೆಯನ್ನು ಜನ ಕಾಪಾಡಿಕೊಂಡು ಬರಬೇಕು. ಕೇಂದ್ರ ಸರ್ಕಾರದ ಸೂಚನೆಯಂತೆ ಯಾರೂ ವಿಜಯೋತ್ಸವ ಆಚರಣೆ ಮಾಡಬಾರದು ಎಂದು ಮನವಿ ಮಾಡಿದರು.

ABOUT THE AUTHOR

...view details