ಬೆಂಗಳೂರು: ಶಾಂತಿ ಕದಡುವ ಪ್ರಯತ್ನ ನೀವು ಮಾಡಬೇಡಿ. ಇಂತಹ ಪ್ರಯತ್ನಕ್ಕೆ ನಾವು ಜಗ್ಗುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ವಿರುದ್ಧವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಾತನಾಡಿದ್ದಾರೆ. ಒಬ್ಬ ಸಿಎಂ ಜವಾಬ್ದಾರಿ ಮರೆತು ಇಂತಹ ಹೇಳಿಕೆ ಕೊಟ್ಟಿದ್ದಾರೆ. ರಾಜಕೀಯಕ್ಕಾಗಿ ಇಂತಹ ಹೇಳಿಕೆ ಕೊಡುವುದು ಬೇಡ. ಸಾಂಗ್ಲಿ, ಸೊಲ್ಲಾಪುರ ನಮ್ಮ ರಾಜ್ಯಕ್ಕೆ ಸೇರಿಸುತ್ತೇವೆ. ಮಹಾಜನ್ ವರದಿಯಲ್ಲೂ ಕ್ಲೇಮ್ ಮಂಡಿಸಿದ್ದೇವೆ. ಈಗಲೂ ಅದಕ್ಕೆ ನಾವು ಬದ್ಧವಿದ್ದೇವೆ. ಗಡಿ, ನೆಲ, ಜಲ ಭಾಷೆ ವಿಚಾರದಲ್ಲಿ ನಾವು ಒಂದೇ ರೀತಿ ಇರುತ್ತೇವೆ ಎಂದರು.