ಬೆಂಗಳೂರು:ಜಿಲೆಟಿನ್ ಸ್ಫೋಟ ಪ್ರಕರಣದ ಕುರಿತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಜಿಲೆಟಿನ್ ಸ್ಫೋಟ ಪ್ರಕರಣ ಸಿಐಡಿಗೆ ವಹಿಸಿದ ಸರ್ಕಾರ: ಗೃಹ ಸಚಿವರಿಂದ ಸ್ಪಷ್ಟನೆ - ಗೃಹ ಸಚಿವ ಬಸವರಾಜ ಬೊಮ್ಮಾಯಿ
ಜಿಲೆಟಿನ್ ಸ್ಫೋಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ಚಿಕ್ಕಬಳ್ಳಾಪುರದ ಹಿರೆನಾಗವೇಲಿ ಕ್ವಾರಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿರುವ ಅವರು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿಸಿದ್ದೇನೆ ಎಂದರು.
ಘಟನೆಯ ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸುತ್ತೇನೆ, ನನ್ನ ಇಲಾಖೆಯಿಂದಲೇ ಕ್ರಮ ಆರಂಭಿಸುತ್ತೇನೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.