ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವ ಬೇಡಿಕೆ ಕುರಿತು ಮಾತುಕತೆಗೆ ಬರುವಂತೆ ಸ್ವಾಮೀಜಿಗಳನ್ನು ಆಹ್ವಾನಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಂಚಮಸಾಲಿ ಶ್ರೀಗಳಿಗೆ ಸರ್ಕಾರದ ಕ್ರಮಗಳ ಕುರಿತು ಮನವರಿಕೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ - Basavaraja Bommai
ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವ ಬೇಡಿಕೆ ಕುರಿತು ಮುಂದಿನ ದಿನಗಳಲ್ಲಿ ಮಾತುಕತೆ ಮೂಲಕ ನಡೆಸಬೇಕಾದ ಪ್ರಕ್ರಿಯೆ ಕುರಿತು ಚರ್ಚೆ ಮಾಡೋಣ ಎನ್ನುವುದು ಸಿಎಂ ನಿಲುವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗೃಹ ಸಚಿವ ಬೊಮ್ಮಾಯಿ
ಆರ್.ಟಿ ನಗರ ನಿವಾಸದಲ್ಲಿ ಮಾತನಾಡಿದ ಅವರು, 2ಎ ಮೀಸಲಾತಿಗೆ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟದ ಬಗ್ಗೆ ಈಗಾಗಲೇ ಸಿಎಂ ಜತೆ ಮಾತನಾಡಿದ್ದೇವೆ. ಹಿಂದುಳಿದ ವರ್ಗಗಳ ಆಯೋಗ ಸಭೆ ನಡೆಸಿ ಈ ಬಗ್ಗೆ ಸಮಾಲೋಚಿಸಲಿದೆ. ಸಂವಿಧಾನದ ಪ್ರಕಾರ ಆಯೋಗದ ಮೂಲಕವೇ ಶಿಫಾರಸು ಬರಬೇಕು.
ಇಂದು ಪಂಚಮಸಾಲಿ ಸಮಾವೇಶ ನಡೆದಿದೆ. ಸ್ವಾಮೀಜಿಗಳ ಜತೆ ಈಗಾಗಲೇ ಮಾತಾಡಿದ್ದೇವೆ. ಸರ್ಕಾರ ಇದುವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮನವರಿಕೆ ಮಾಡುತ್ತೇವೆ. ಮಾತುಕತೆಗೆ ಬನ್ನಿ ಅಂತ ಸ್ವಾಮೀಜಿಗಳನ್ನು ಆಹ್ವಾನಿಸುತ್ತೇವೆ. ಸಿಎಂ ಯಡಿಯೂರಪ್ಪ ಕೂಡ ಇದೇ ಮಾತನ್ನು ಹೇಳಿದ್ದಾರೆ ಎಂದರು.