ಕರ್ನಾಟಕ

karnataka

ETV Bharat / state

ವಿಕಾಸಸೌಧದಲ್ಲಿ ಅಧಿಕಾರಿಗಳ ಜೊತೆ ಗೃಹ ಸಚಿವರ ಮಹತ್ವದ ಸಭೆ - Prevention of cyber crimes

ವಿಕಾಸಸೌಧದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಹಾಗೂ ಸಮಾಜಘಾತುಕ ಶಕ್ತಿಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದ್ದಾರೆ.

Home Minister's important meeting with officials in Vikasasoudha
ವಿಕಾಸಸೌಧದಲ್ಲಿ ಅಧಿಕಾರಿಗಳ ಜೊತೆ ಗೃಹ ಸಚಿವರ ಮಹತ್ವದ ಸಭೆ

By

Published : Jan 1, 2021, 10:49 PM IST

ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ವಿಕಾಸಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಗೃಹ ಇಲಾಖೆಗೆ ಸಂಬಂಧಪಟ್ಟ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಸಭೆಯಲ್ಲಿ ಸಚಿವರು ಪ್ರಮುಖವಾಗಿ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಹಾಗೂ ಸಮಾಜಘಾತುಕ ಶಕ್ತಿಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದ್ದಾರೆ. ಹಾಗೂ ಅಗತ್ಯ ಬಿದ್ದಾಗ ಸೂಕ್ತ ನಿರ್ಧಾರ ಕೈಗೊಂಡು ಸಮಾಜದ ಸ್ವಾಸ್ಥ್ಯ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೈಬರ್ ಅಪರಾಧಗಳನ್ನು ತಡೆಗಟ್ಟಲು ನವೀನ ತಂತ್ರಜ್ಞಾನದ ಬಳಕೆ ಬಗ್ಗೆ ಈ ವೇಳೆ ಚರ್ಚಿಸಲಾಗಿದೆ. ಇಲಾಖೆಯಲ್ಲಿನ ಎಲ್ಲಾ ಹಂತದ ಅಧಿಕಾರಿಗಳಿಗೆ ಬಡ್ತಿ ಮತ್ತು ನೇಮಕಾತಿಗಳ ಕುರಿತಂತೆ ಸಮಗ್ರವಾದ ಮಾತುಕತೆ ನಡೆದಿದೆ ಎಂಬ ಮಾಹಿತಿ ಇದೆ.

ABOUT THE AUTHOR

...view details