ಕರ್ನಾಟಕ

karnataka

ETV Bharat / state

ಕೊರೊನಾ ನಿಯಂತ್ರಿಸಲು ಕ್ರಮ: ಪೊಲೀಸ್​​ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ - ಕೊರೊನಾ ವೈರಸ್​​

ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್​ ಹರಡುವುದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳು ಕುರಿತು ಚರ್ಚಿಸಲು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಹಿರಿಯ ಪೊಲೀಸ್​​ ಅಧಿಕಾರಿಗಳ ಸಭೆ ನಡೆಸಿದರು.

Home Minister Basavaraj Bommai
ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

By

Published : Jul 15, 2020, 1:14 PM IST

ಬೆಂಗಳೂರು: ನಗರದಲ್ಲಿ ಒಂದು ವಾರ ಲಾಕ್​​​​ಡೌನ್​ ಹಿನ್ನೆಲೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲು ಗೃಹ ಸಚಿವ ಬಸವರಾಜ್​​ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.

ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಕೊರೊನಾ ಮಹಾನಗರದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಅಲ್ಲದೆ ರಾಜ್ಯದ ಇತರೆ ಭಾಗಗಳಿಗೂ ಇದು ವ್ಯಾಪಿಸುತ್ತಿದೆ. ಹೀಗಾಗಿ ರೋಗ ನಿಯಂತ್ರಿಸಲು ಕೈಗೊಳ್ಳುವ ಕ್ರಮಗಳು ಹಾಗೂ ಪೊಲೀಸ್ ಭದ್ರತೆ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.

ಕ್ಲಬ್ ಡ್ಯಾನ್ಸ್ ಸಂದರ್ಭದಲ್ಲಿ ಭದ್ರತೆ ಹಾಗೂ ಜನಜೀವನ ಇತರ ವಿಷಯಗಳ ಕುರಿತು ಕೂಡ ಚರ್ಚೆ ನಡೆಯುತ್ತಿದೆ. ರೋಗ ನಿಯಂತ್ರಿಸಲು ಲಾಕ್​ಡೌನ್​​​ ಕಾಲಾವಧಿಯನ್ನು ಅತ್ಯಂತ ವ್ಯವಸ್ಥಿತವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ABOUT THE AUTHOR

...view details