ಕರ್ನಾಟಕ

karnataka

ETV Bharat / state

ಕೇಂದ್ರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತನ್ನಿ: ಪೊಲೀಸ್ ಅಧಿಕಾರಿಗಳಿಗೆ ಗೃಹ ‌ಸಚಿವರ ಸೂಚನೆ - police officers

ಮೂರನೇ ಹಂತದ ಲಾಕ್​​ಡೌನ್ ಆರಂಭವಾಗಿದ್ದು, ಕೇಂದ್ರ ಸರ್ಕಾರದ ಕೆಲವು ಸೂಚನೆಗಳನ್ನು ಎಲ್ಲಾ ಅಧಿಕಾರಿಗಳು ಚಾಚು ತಪ್ಪದೇ ಪಾಲಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ.

Home Minister meeting with police officers
ಗೃಹ ಸಚಿವ ಬಸವರಾಜ ಬೊಮ್ಮಾಯಿ

By

Published : May 6, 2020, 8:19 PM IST

ಬೆಂಗಳೂರು: ಮೂರನೇ ಹಂತದ ಲಾಕ್​​ಡೌನ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಂತೆ ಪೊಲೀಸ್ ಇಲಾಖೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಇಲಾಖೆ ಮಹಾನಿರ್ದೇಶಕರು (ಡಿಜಿ ಮತ್ತು ಐಟಿಪಿ), ಹೆಚ್ಚುವರಿ ಪೊಲೀಸ್ ಮಹಾನಿರೀಕ್ಷಕರು (ಎಡಿಜಿಪಿ) ಹಾಗೂ ಎಲ್ಲಾ ವಲಯದ ಪೊಲೀಸ್ ಮಹಾನಿರೀಕ್ಷಕರ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಡಿಯೋ ಸಂವಾದ ನಡೆಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರ್ದೇಶನ

ಲಾಕ್​​ಡೌನ್ ಮುಂದುವರೆದಿದ್ದು, ಮಾರ್ಗಸೂಚಿ ಪಾಲನೆ ಕುರಿತು ಮಾಹಿತಿ ನೀಡಿದರು. ನಂತರ ಹೊರ ರಾಜ್ಯದಿಂದ ಬರುವವರಿಗೆ ಅವಕಾಶ, ಪರವಾನಗಿ ಇಲ್ಲದ ಹೊರ ರಾಜ್ಯದ ವಾಹನ ಸಂಚಾರ ನಿಷೇಧ ಸೇರಿದಂತೆ ಪೊಲೀಸ್ ಇಲಾಖೆಗೆ ಹಲವು ಸೂಚನೆ ನೀಡಿದ್ದಾರೆ.

ಗೃಹ ಸಚಿವರ ಸೂಚನೆಗಳು:

  • ಬೇರೆ ರಾಜ್ಯದಿಂದ ಬರುವಂತಹ ಜನರನ್ನು‌ ಸೇವಾ ಬಂಧು ಆ್ಯಪ್​​ನಲ್ಲಿ ನೋಂದಾಯಿಸಬೇಕು ಹಾಗೂ ಎರಡೂ ರಾಜ್ಯಗಳಿಂದ ಪರವಾನಗಿ ಪಡೆದಿರಬೇಕು. ಅಂತಹವರನ್ನು ಕಟ್ಟುನಿಟ್ಟಿನ ಆರೋಗ್ಯ ತಪಾಸಣೆಗೆ ಒಳಪಡಿಸಿ ಪರಿಶೀಲಿಸಬೇಕು. ಈ ಕಾರಣಕ್ಕಾಗಿ ಅಂತಾರಾಜ್ಯ ಚೆಕ್ ​​​ಪೋಸ್ಟ್‌ಗಳಲ್ಲಿ ಹೆಚ್ಚಿನ ಆರೋಗ್ಯ ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು. ಇದರ ಹೆಚ್ಚಿನ ಸಹಾಯಕ್ಕಾಗಿ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ.
  • ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಅಂತಾರಾಜ್ಯಗಳಿಂದ ಯಾವುದೇ ಪರವಾನಗಿ ಇಲ್ಲದೆ ಹಾಗೂ ಅನಧಿಕೃತ ವ್ಯಕ್ತಿಗಳಿಂದ ಪರವಾನಗಿ ಪಡೆದು ಬಂದಿರುವ ವಾಹನಗಳನ್ನು ನಿಷೇಧಿಸಬೇಕು.
  • ನಮ್ಮ ರಾಜ್ಯದಿಂದ ಬೇರೆ ರಾಜ್ಯಗಳಿಗೆ ಹೋಗಬೇಕಾಗಿರುವ ಜನರಿಗೆ ರಾಜ್ಯ ಸರ್ಕಾರದ ಸೂಚನೆಯಂತೆ ಪರವಾನಗಿ ನೀಡುವುದನ್ನು ನಿಯಂತ್ರಿಸಬೇಕು.
  • ಕ್ವಾರಂಟೈನ್​ ಹಾಗೂ ಬಫರ್ ವಲಯಗಳನ್ನು ಕರಾರುವಾಕ್ಕಾಗಿ ನಿಭಾಯಿಸಬೇಕು ಹಾಗೂ ಇತರ ಪ್ರದೇಶಗಳಲ್ಲಿ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೂ ವಾಹನ ಮತ್ತು ಜನರ ಓಡಾಟವನ್ನು ನಿಷೇಧಿಸುವ ಕುರಿತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಈ ಎಲ್ಲಾ ಸೂಚನೆಗಳನ್ನು ಎಲ್ಲಾ ಅಧಿಕಾರಿಗಳು ಚಾಚು ತಪ್ಪದೇ ಪಾಲಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ.

ABOUT THE AUTHOR

...view details