ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ ಕುರಿತಂತೆ ದಕ್ಷ ಪೊಲೀಸ್ ಅಧಿಕಾರಿಗಳು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ನೈತಿಕ ಸ್ಥೈರ್ಯ ಕುಗ್ಗಿಸಬಾರದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪರೋಕ್ಷವಾಗಿ ಹೆಚ್ಡಿಕೆಗೆ ಟಾಂಗ್ ತಿರುಗೇಟಿ ನೀಡಿದ್ದಾರೆ.
ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸಬಾರದು: ಹೆಚ್ಡಿಕೆಗೆ ಟಾಂಗ್ ಕೊಟ್ಟ ಬೊಮ್ಮಾಯಿ - ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ ಕುರಿತಂತೆ ದಕ್ಷ ಪೊಲೀಸ್ ಅಧಿಕಾರಿಗಳು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ನೈತಿಕ ಸ್ಥೈರ್ಯ ಕುಗ್ಗಿಸಬಾರದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪರೋಕ್ಷವಾಗಿ ಹೆಚ್ಡಿಕೆಗೆ ಟಾಂಗ್ ತಿರುಗೇಟಿ ನೀಡಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರಿನ ನಿವಾಸದಲ್ಲಿ ಮಾತನಾಡಿದ ಅವರು, ಆರೋಪಿ ಆದಿತ್ಯ ರಾವ್ ನಿನ್ನೆ (ಜ.21) ರಾತ್ರಿ ಬೆಂಗಳೂರಿಗೆ ಬಂದು ಬೆಳಗ್ಗೆ ಶರಣಾಗಿದ್ದಾನೆ. ಸ್ಪೋಟಕಕ್ಕೆ ಬಳಕೆಯಾದ ವಸ್ತುಗಳ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ತನಿಖೆಗೆ ಆದೇಶ ಮಾಡಲಾಗಿದೆ. ತನಿಖೆ ಮುಂದುವರಿಸಿ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತದೆ ಎಂದರು.
ಉಗ್ರ ಸಂಘಟನೆಗಳ ಜೊತೆ ಸಂಪರ್ಕ ವಿಚಾರ ಕುರಿತು ತನಿಖೆ ಬಳಿಕ ಸ್ಪಷ್ಟವಾಗುತ್ತದೆ. ಕೇಂದ್ರ ತಂಡ ಈಗಾಗಲೇ ತನಿಖೆ ಕೈಗೊಂಡಿದೆ ಎಂದರು.