ಬೆಂಗಳೂರು: ಜನಾಶೀರ್ವಾದ ಯಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ ಸಂಬಂಧ ಕೇಸ್ ದಾಖಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಭಗವಂತ ಖೂಬಾ ಬೆಂಬಲಿಗರಿಂದ ನಾಡ ಬಂದೂಕು ಪ್ರದರ್ಶನ ವಿಚಾರವಾಗಿ ಉತ್ತರ ಕೊಡಲು ನಿರಾಕರಿಸಿದ್ದು, ಪ್ರಕರಣ ದಾಖಲಾಗಿದೆ ಎಂದರು.
ಜನಾಶೀರ್ವಾದ ಯಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ..ದೂರು ದಾಖಲಾಗಿದೆ ಎಂದ ಗೃಹ ಸಚಿವ - ಕೇಂದ್ರ ಸಚಿವ ಭಗವಂತ ಖೂಬಾ
ಯಾದಗಿರಿಯಲ್ಲಿ ಬಿಜೆಪಿ ಜನಾಶೀರ್ವಾದ ಯಾತ್ರೆ ವೇಳೆ ಸಂಸದ ಭಗವಂತ ಖೂಬಾ ಬೆಂಬಲಿಗರು ನಾಡ ಬಂದೂಕಿನಿಂದ ಗುಂಡು ಹಾರಿಸಿದ್ದರು. ಈ ಘಟನೆ ಸಂಬಂಧ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ
ಬುಧವಾರ ಯಾದಗಿರಿಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ಸಂದರ್ಭ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸಲು ಬಂದೂಕಿನಲ್ಲಿ ಗುಂಡು ಹಾರಿಸಲಾಗಿತ್ತು. ಈ ವರ್ತನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯನ್ನು ಭಗವಂತ ಖೂಬಾ ಸಮರ್ಥಿಸಿಕೊಂಡಿದ್ದರು.
ಓದಿ:ಯಾದಗಿರಿ: ಬಂದೂಕಿನಿಂದ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಭರ್ಜರಿ ಸ್ವಾಗತ