ಕರ್ನಾಟಕ

karnataka

ETV Bharat / state

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಪುಂಡರ ವಿರುದ್ಧ ಕ್ರಮ : ಸಚಿವ ಆರಗ ಜ್ಞಾನೇಂದ್ರ - ರಾಯಣ್ಣ ಪ್ರತಿಮೆ ದ್ವಂಸ ಕುರಿತು ಆರಗ ಜ್ನಾನೇಂದ್ರ ಹೇಳಿಕೆ

ಗಡಿ ಜಿಲ್ಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾತನಾಡುವ ಜನತೆ, ಅತ್ಯಂತ ಅನ್ಯೋನ್ಯತೆ, ಪ್ರೀತಿ ಹಾಗೂ ಸಾಮರಸ್ಯದಿಂದ ಇದ್ದಾರೆ. ರಾಯಣ್ಣ ಹಾಗೂ ಶಿವಾಜಿಯವರಂಥಹ ಮಹನೀಯರ ಬಗ್ಗೆ ಎಳ್ಳಷ್ಟೂ ಗೌರವ ಇಲ್ಲದ ದುಷ್ಕರ್ಮಿಗಳ ಉದ್ದೇಶ ಸಮಾಜದಲ್ಲಿನ ನೆಮ್ಮದಿಗೆ ಭಂಗ ತರುವುದಾಗಿದೆ. ಹೀಗಾಗಿ, ಅವರನ್ನು ಬಗ್ಗು ಬಡಿಯಲಾಗುವುದು..

Araga Jnanendra
ಆರಗ ಜ್ಞಾನೇಂದ್ರ

By

Published : Dec 19, 2021, 5:40 PM IST

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಭಗ್ನಗೊಳಿಸಿ ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ರಾಯಣ್ಣನ ಮೂರ್ತಿ ಭಗ್ನಗೊಳಿಸಿದ ಪುಂಡರ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಕ್ರಮದ ಭರವಸೆ ನೀಡಿರುವುದು..

ಗಡಿ ಜಿಲ್ಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾತನಾಡುವ ಜನತೆ, ಅತ್ಯಂತ ಅನ್ಯೋನ್ಯತೆ, ಪ್ರೀತಿ ಹಾಗೂ ಸಾಮರಸ್ಯದಿಂದ ಇದ್ದಾರೆ. ರಾಯಣ್ಣ ಹಾಗೂ ಶಿವಾಜಿಯವರಂಥಹ ಮಹನೀಯರ ಬಗ್ಗೆ ಎಳ್ಳಷ್ಟೂ ಗೌರವ ಇಲ್ಲದ ದುಷ್ಕರ್ಮಿಗಳ ಉದ್ದೇಶ ಸಮಾಜದಲ್ಲಿನ ನೆಮ್ಮದಿಗೆ ಭಂಗ ತರುವುದಾಗಿದೆ. ಹೀಗಾಗಿ, ಅವರನ್ನು ಬಗ್ಗು ಬಡಿಯಲಾಗುವುದು ಎಂದು ತಿಳಿಸಿದ್ದಾರೆ.

ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ ಸಂಬಂಧಿಸಿದ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಿದ್ದೇನೆ ಎಂದರು.

ಓದಿ:ಕನ್ನಡಪರ ಹೋರಾಟಗಾರರ ಮೇಲೆ ಪ್ರತಾಪ ತೋರಿಸಬೇಡಿ : ಸರ್ಕಾರದ ಕಿವಿ ಹಿಂಡಿದ ಹೆಚ್​ಡಿಕೆ

ABOUT THE AUTHOR

...view details