ಕರ್ನಾಟಕ

karnataka

ETV Bharat / state

ಪೊಲೀಸರಿಗೆ ಶರಣಾಗುವಂತೆ ಆರೋಪಿ ದಿವ್ಯಾ ಹಾಗರಗಿಗೆ ಎಚ್ಚರಿಕೆ ನೀಡಿದ ಗೃಹ ಸಚಿವ

ದಿವ್ಯಾ ಹಾಗರಗಿ ಸ್ಟ್ರಾಂಗ್ ಏನಿಲ್ಲ, ಅವರು ಊರು ಬಿಟ್ಟಿದ್ದಾರೆ. ಸದ್ಯದಲ್ಲೇ ಬಂಧಿಸಲಾಗುವುದು. ಶೀಘ್ರವೇ ಪೊಲೀಸರು ಅವರ ಆಸ್ತಿ ಮುಟ್ಟುಗೋಲು ಹಾಕಲಿದ್ದಾರೆ ಎಂದು ಗೃಹ ಸಚಿವರು ಹೇಳಿದರು.

ಶರಣಾಗುವಂತೆ ಆರೋಪಿ ದಿವ್ಯ ಹಾಗರಗಿಗೆ ಎಚ್ಚರಿಕೆ ನೀಡಿದ ಗೃಹ ಸಚಿವ
ಶರಣಾಗುವಂತೆ ಆರೋಪಿ ದಿವ್ಯ ಹಾಗರಗಿಗೆ ಎಚ್ಚರಿಕೆ ನೀಡಿದ ಗೃಹ ಸಚಿವ

By

Published : Apr 28, 2022, 3:55 PM IST

ಬೆಂಗಳೂರು: ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಇದುವರೆಗೂ ಬಂಧನ ಮಾಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈಗಾಗಲೇ ದಿವ್ಯಾ ಹಾಗರಗಿಗೆ ಅರೆಸ್ಟ್ ವಾರೆಂಟ್ ಹೊರಡಿಸಲಾಗಿದೆ. ಗೌರವಯುತವಾಗಿ ಬಂದು ಶರಣಾಗಬೇಕೆಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, ಹಾಗರಗಿ ಸ್ಟ್ರಾಂಗ್ ಏನಿಲ್ಲ, ಅವರು ಊರು ಬಿಟ್ಟಿದ್ದಾರೆ. ಸದ್ಯದಲ್ಲೇ ಬಂಧಿಸಲಾಗುವುದು. ಶೀಘ್ರವೇ ಪೊಲೀಸರು ಅವರ ಆಸ್ತಿ ಮುಟ್ಟುಗೋಲು ಹಾಕಲಿದ್ದಾರೆ ಎಂದರು.

ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ಹಣಕ್ಕಾಗಿ ಸರ್ಕಾರಿ ಉದ್ಯೋಗಗಳನ್ನು ಮಾಡುವ ಗ್ಯಾಂಗ್ ಅನ್ನು ಹೊರಗೆ ತರುತ್ತೇವೆ ಎಂದರು. ಇದೇ ವೇಳೆ, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಹಾಜರಾಗದ ವಿಷಯಕ್ಕೆ ಪ್ರತಿಕ್ರಿಯಿಸಿ, ಪ್ರಿಯಾಂಕ್ ಖರ್ಗೆ ಅನೇಕ ಆರೋಪ ಮಾಡಿದ್ದಾರೆ. ಸಿಐಡಿಯವರು ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಅವರು ತನಿಖೆಗೆ ಸಹಕಾರ ನೀಡದೆ ಪಲಾಯನ ಮಾಡಿದ್ದಾರೆ. ಅವರಿಗೆ ಕಾನೂನು ಗೊತ್ತಿಲ್ಲ. ನನ್ನ ಬಳಿ ದಾಖಲೆ ಇದೆ ಅನ್ನುತ್ತಾರೆ. ಆ ದಾಖಲೆ ಕೊಡಬಹುದಲ್ಲವೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಗರ್ಭಕೋಶಕ್ಕೆ ಕತ್ತರಿ ಕೇಸ್​: ಕಾನೂನಿನಡಿ ಮಹಿಳೆಯರಿಗೆ ಪರಿಹಾರ- ಸಿಎಂ

ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವರ್ಗಾವಣೆ ಸಹಜ ಪ್ರಕ್ರಿಯೆ. ಹಾಗಂತ ಅವರನ್ನು ಅಪರಾಧಿ ಅನ್ನೋದು ಸರಿಯಲ್ಲ. ತನಿಖೆಯಲ್ಲಿ ಯಾರ ಹೆಸರು ಬರುತ್ತದೆಯೋ ಅವರೇ ತಪ್ಪಿತಸ್ಥರಾಗ್ತಾರೆ ಎಂದು ಹೇಳಿದರು.

ಬೆಂಗಳೂರಲ್ಲಿ ಯುವತಿ ಮೇಲೆ ಆಸಿಡ್ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ, ಈ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ನಾಗೇಶ್ ಎಂಬುವನು ಯುವತಿ ಮೇಲೆ ಆಸಿಡ್ ಹಾಕಿದ್ದಾನೆ. ಈ ಕಾಲದಲ್ಲಿ ಇದೊಂದು ಅಮಾನುಷ ಕೃತ್ಯ. ಪೊಲೀಸರು ಅವನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಯುವತಿಯನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಿ, ಉತ್ತಮ ಚಿಕಿತ್ಸೆ ಕೊಡಿಸಲಾಗ್ತಿದೆ ಎಂದು ಹೇಳಿದರು.

For All Latest Updates

TAGGED:

ABOUT THE AUTHOR

...view details