ಬೆಂಗಳೂರು:ಬಾಗಲಗುಂಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳವು ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ಖೆಡ್ಡಾಗೆ ಬೀಳಿಸಿ 18 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಸಿದ್ದಪ್ಪ ಬಿ ಕೆ ಎಂಬ ಆರೋಪಿ ವಿಜಯಲಕ್ಷ್ಮಿ ಬಡಾವಣೆಯಲ್ಲಿ ಮನೆಕಳ್ಳತನ ಮಾಡಿ ಪರಾರಿಯಾಗಿದ್ದ. ಈ ಕುರಿತು ನಗರದ ಠಾಣೆಯಲ್ಲಿ ಮನೆ ಮಾಲೀಕ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ 18 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ಇನ್ನೋವಾ ಕಾರು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.