ನೆಲಮಂಗಲ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ಇಂದಿರಾ ನಗರದ ನಿವಾಸಿ ವಿನುತಾ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೆಲಮಂಗಲ: ಆತ್ಮಹತ್ಯೆಗೆ ಶರಣಾದ ಗೃಹಿಣಿ - committed sucide
ನೆಲಮಂಗಲ ಪಟ್ಟಣದ ಇಂದಿರಾ ನಗರದ ನಿವಾಸಿ ವಿನುತಾ ಎಂಬುವರು ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಮೃತಪಟ್ಟ ವಿನುತಾ
ಎರಡು ವರ್ಷದ ಹಿಂದೆ ಪಟ್ಟಣದ ನಿವಾಸಿ ಸಂತೋಷಕುಮಾರ್ ಎಂಬುವವರ ಜತೆ ವಿವಾಹವಾಗಿತ್ತು. ಕೌಟುಂಬಿಕ ಕಲಹದಿಂದ ವಿನುತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಪೊಲೀಸರು ಪತಿ ಸಂತೋಷ್ ಕುಮಾರ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.