ಬೆಂಗಳೂರು:ಪ್ರೀತಿಸಿ ಕೈಹಿಡಿದ ಗಂಡ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಯತ್ರಿ ನಗರದಲ್ಲಿ ನಡೆದಿದೆ.
ಇಂದುಶ್ರೀ (28) ಮೃತ ದುರ್ದೈವಿ. ಎರಡು ವರ್ಷದಿಂದ ಈಕೆ ರಾಕೇಶ್ ಎಂಬುವವರನ್ನು ಪ್ರೀತಿಸುತ್ತಿದ್ದರು. 9 ತಿಂಗಳ ಹಿಂದೆಯಷ್ಟೇ ಮನೆಯವರನ್ನು ಒಪ್ಪಿಸಿ ರಾಕೇಶ್ ಜೊತೆ ವಿವಾಹವಾಗಿದ್ದರು. ಆದರೆ, ಮದುವೆಯಾದ ಬಳಿಕ ಗಂಡ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ನೊಂದ ಮಹಿಳೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.