ಕರ್ನಾಟಕ

karnataka

ETV Bharat / state

9.74 ಲಕ್ಷ ಮನೆ ನಿರ್ಮಾಣ ಪೂರ್ಣಗೊಳಿಸಲು 10,194 ಕೋಟಿ ರೂ. ಅನುದಾನ ಮಂಜೂರಾತಿಗೆ ಕ್ರಮ: ಸಿಎಂ - bangalore news

ಮುಖ್ಯಮಂತ್ರಿ ಬಿಎಸ್​ವೈ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆ ಹಚ್ಚಿ ಸರ್ಕಾರಕ್ಕೆ 8,000 ಕೋಟಿ ರೂ. ಉಳಿತಾಯ ಮಾಡಿರುವುದು ಶ್ಲಾಘನೀಯ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ
ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

By

Published : Jun 1, 2020, 9:48 PM IST

Updated : Jun 1, 2020, 9:55 PM IST

ಬೆಂಗಳೂರು: ಪ್ರಗತಿಯಲ್ಲಿರುವ 9.74 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು 10,194 ಕೋಟಿ ರೂ. ಅನುದಾನ ಮಂಜೂರಾತಿ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆ ಹಚ್ಚಿ ಸರ್ಕಾರಕ್ಕೆ 8,000 ಕೋಟಿ ರೂ. ಉಳಿತಾಯ ಮಾಡಿರುವುದು ಶ್ಲಾಘನೀಯ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ವಸತಿ ಯೋಜನೆಗಳ ಪಾರದರ್ಶಕ ಅನುಷ್ಠಾನಕ್ಕೆ ತಾಂತ್ರಿಕ ನೂನತೆಗಳನ್ನು ಸರಿಪಡಿಸಿ. ಅನುದಾನ ದುರುಪಯೋಗ ತಡೆಯಲು ಅಭಿವೃದ್ಧಿಪಡಿಸಲಾಗಿರುವ ವಿಜಿಲ್ ಆ್ಯಪ್ ತಂತ್ರಾಂಶದ ನೆರವು ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

ಕೊಡಗು ಪುನರ್ವಸತಿ ಯೋಜನೆಯಡಿ 115 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಪೂರ್ಣಗೊಂಡಿರುವ 405 ಮನೆಗಳನ್ನು ಶೀಘ್ರವಾಗಿ ಫಲಾನುಭವಿಗಳಿಗೆ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ 1.24 ಲಕ್ಷ ನಿವೇಶನಗಳನ್ನು ಬಡವರಿಗೆ ನೀಡಲು ಗುರುತಿಸಲಾಗಿದ್ದು, 100 ಕೋಟಿ ರೂ. ಲಭ್ಯವಿದೆ. ನಿವೇಶನಗಳನ್ನು ಅಭಿವೃದ್ಧಿಪಡಿಸಿ ಹಂಚಿಕೆ ಮಾಡಲು ಸುಮಾರು 1,000 ಕೋಟಿ ರೂ. ಅವಶ್ಯಕತೆ ಇದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿವರಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಸರ್ಕಾರದ ಜಮೀನಿನಲ್ಲಿರುವ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕಿದೆ. ಕೊಳಚೆ ಅಭಿವೃದ್ಧಿ ಮಂಡಳಿಗೆ ಬದಲಾಗಿ ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ವಿಲೀನಗೊಳಿಸಿದರೆ ಕೊಳಗೇರಿಗಳ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಬಗೆಹರಿಸಬಹುದಾಗಿದೆ ಎಂದು ಸಚಿವರು ಸಲಹೆ ನೀಡಿದರು.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್ ತಾಲೂಕು ಜಿಗಣಿ ಹೋಬಳಿಯ ಕೋನಸಂದ್ರ, ಬೊಮ್ಮಂಡಹಳ್ಳಿ, ಕಾಡುಜಕ್ಕನಹಳ್ಳಿ ಮತ್ತು ಕಸಬಾ ಹೋಬಳಿಯ ಇಂಗ್ಲವಾಡಿ, ಬಗ್ಗನದೊಡ್ಡಿ ಗ್ರಾಮಗಳಲ್ಲಿ ಪ್ರಧಾನಮಂತ್ರಿ ವಸತಿ ಬಡಾವಣೆಯನ್ನು ಅಂದಾಜು 1,264 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಡಿ 4,000ಕ್ಕಿಂತ ಹೆಚ್ಚು ದೂರುಗಳು ದಾಖಲಾಗಿದ್ದು, ಸುಮಾರು 700ಕ್ಕೂ ಹೆಚ್ಚು ದೂರುಗಳನ್ನು ವಿಲೇವಾರಿ ಮಾಡಲಾಗಿದೆ. ದೂರು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Last Updated : Jun 1, 2020, 9:55 PM IST

ABOUT THE AUTHOR

...view details