ಬೆಂಗಳೂರು :ಹುಬ್ಬಳ್ಳಿಯಲ್ಲಿ ಹಿಂಸಾಚಾರಕ್ಕೆ ಇಳಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಖಂಡನೀಯ. ಆದರೆ, ಅದನ್ನೇ ನೆಪವನ್ನಾಗಿ ಮಾಡಿಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಿರುವುದು ಮತ್ತು ಪೊಲೀಸ್ ಠಾಣೆಗಳ ಮೇಲೆ ದಾಳಿ ಯತ್ನ ನಡೆಸಿದ್ದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹುಬ್ಬಳ್ಳಿ ಹಿಂಸಾಚಾರ ಪ್ರಕರಣ : ಕಠಿಣ ಕ್ರಮಕ್ಕೆ ನಳಿನ್‍ಕುಮಾರ್ ಕಟೀಲ್ ಮನವಿ - ಹುಬ್ಬಳ್ಳಿ ಹಿಂಸಾಚಾರವನ್ನು ಖಂಡಿಸಿದ ನಳಿನ್‍ಕುಮಾರ್ ಕಟೀಲ್
ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಖಂಡನೀಯ. ಆದ್ರೆ, ಇದನ್ನೇ ನೆಪವಾಗಿ ಇಟ್ಟುಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಿರುವುದು ಸರಿಯಲ್ಲ. ಸಮಾಜದ್ರೋಹಿಗಳನ್ನು ಶೀಘ್ರವೇ ಬಂಧಿಸಿ, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕಟೀಲ್ ಒತ್ತಾಯಿಸಿದರು..
ಬಿಜೆಪಿ ಇದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕೈಗೆ ತೆಗೆದುಕೊಳ್ಳುವ ಸಮಾಜ ವಿರೋಧಿ ಶಕ್ತಿಗಳನ್ನು ಸಮರ್ಥ ರೀತಿಯಲ್ಲಿ ಹತ್ತಿಕ್ಕುವ ಕೆಲಸವನ್ನು ಸರಕಾರ ಮಾಡಬೇಕು. ಕಾನೂನು ಕೈಗೆತ್ತಿಕೊಳ್ಳುವ ಸಮಾಜದ್ರೋಹಿಗಳನ್ನು ಶೀಘ್ರವೇ ಬಂಧಿಸಿ,ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕಟೀಲ್ ಒತ್ತಾಯಿಸಿದರು. ಸಿಸಿ ಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಹಲವಾರು ಆರೋಪಿಗಳನ್ನು ಬಂಧಿಸಿದ ಪೊಲೀಸರ ಕ್ರಮಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
ಇದನ್ನೂ ಓದಿ:ಕರ್ನಾಟಕ ಇದನ್ನು ಸಹಿಸೋದಿಲ್ಲ, ಇದಕ್ಕೆ ಮತ್ತೆ ಬೇರೆ ರೀತಿಯ ರಾಜಕೀಯ ಬಣ್ಣ ಬಳಿಯೋದು ಬೇಡ : ಸಿಎಂ