ಕರ್ನಾಟಕ

karnataka

ETV Bharat / state

ಪತ್ನಿ ವಿರುದ್ಧವೇ ಮತಾಂತರ ಕಿರುಕುಳ ಪ್ರಕರಣ ದಾಖಲಿಸಿದ ಪತಿ - ಮತಾಂತರ ಪ್ರಕರಣ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಯುವಕನಿಗೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದು, ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಾಲಕ್ಷ್ಮಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru
ಬೆಂಗಳೂರು

By

Published : Dec 2, 2022, 11:03 AM IST

ಬೆಂಗಳೂರು: ಪ್ರೀತಿಸಿ ಮದುವೆಯಾದ ಪತ್ನಿಯ ವಿರುದ್ಧವೇ ಮತಾಂತರಕ್ಕೆ ಒತ್ತಾಯಿಸಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದ್ದು, ನೊಂದ ಪತಿ ಮಹಾಲಕ್ಷ್ಮಿ ಲೇಔಟ್ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ. ಹಿಂದೂ ವ್ಯಕ್ತಿ ತನ್ನ ಪತ್ನಿ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ:ದೂರುದಾರ ವೆಲ್ಡಿಂಗ್ ವೃತ್ತಿ ಮಾಡಿಕೊಂಡಿದ್ದು, ಕ್ರಿಶ್ಚಿಯನ್​ ಯುವತಿಯನ್ನು ಪ್ರೀತಿಸಿ 2019ರಲ್ಲಿ ಮದುವೆಯಾಗಿದ್ದಾರೆ. ಇದೀಗ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಈತನಿಗೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದು, ಜೀವ ಬೆದರಿಕೆ ಹಾಕುತ್ತಿದ್ದಾರೆ. ಕೆಲಸದ ನಿಮಿತ್ತ ಬೇರೆ ಬೇರೆ ರಾಜ್ಯಗಳಿಗೆ ಹೋದಾಗ ಪತಿ ಕಣ್ಮರೆಯಾಗಿದ್ದಾರೆ ಎಂದು ಸುಳ್ಳು ದೂರುಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ತನ್ನ ಹೆಸರಿನಲ್ಲಿ ಮನೆಯ ಸುತ್ತಮುತ್ತಲಿನವರ ಬಳಿ ಸಾಲ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ:ರಾಮನಗರ: ಮತಾಂತರ ಯತ್ನ ಆರೋಪ.. ದೂರು

ABOUT THE AUTHOR

...view details