ಬೆಂಗಳೂರು:ಬಾರ್ನಲ್ಲಿ ಕ್ಯಾಶಿಯರ್ ಆಗಿದ್ದು ಸುಖ ಸಂಸಾರ ನಡೆಸುವುದಕ್ಕೆ ಏನೂ ತೊಂದರೆ ಇರಲಿಲ್ಲ. ಐದು ವರ್ಷದ ದಾಂಪತ್ಯಕ್ಕೆ ಸಾಕ್ಷಿ ಎಂಬಂತೆ ಒಂದು ಮಗು ಕೂಡ ಇದೆ. ಆದರೆ ಹೆಂಡತಿ ಕಾಟ ಕೊಡುತ್ತಿದ್ದಾಳೆ ಎಂದ ಬೇಸತ್ತು ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಶ್ರೀನಗರದ ಆವಲಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಮೂಲದ ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ಅಣ್ಣಯ್ಯ ಉಮಾರನ್ನು ಐದು ವರ್ಷಗಳ ಹಿಂದೆ ಮದುವೆ ಆಗಿದ್ದರು. 'ಎಷ್ಟು ದುಡಿದರೂ ಹೆಂಡತಿ ದುಡ್ಡು ದುಡ್ಡು ಎನ್ನುತ್ತಾಳೆ. ನಾನು ಎಷ್ಟು ದುಡಿದರೂ ಸಾಕಾಗುವುದಿಲ್ಲಾ. ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಆಗಿದೆ. ನನ್ಮ ಸಾವಿಗೆ ನಾನೇ ಕಾರಣ' ಎಂದು ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.