ಬೆಂಗಳೂರು:ಮದುವೆಯಾದ ಒಂದೇ ತಿಂಗಳಲ್ಲಿ ಗಂಡ ತನ್ನ ಪತ್ನಿಯ ಕನ್ಯತ್ವದ ಪರೀಕ್ಷೆ ಮಾಡಿಸಿರುವ ವಿಚಿತ್ರ ಘಟನೆ ನಗರದಲ್ಲಿ ನಡೆದಿದೆ.
ಕಳೆದ ಫೆಬ್ರವರಿಯಲ್ಲಿ ನಗರದ ಬಂಡೆಪಾಳ್ಯ ನಿವಾಸಿಯಾಗಿರುವ ಮಹಿಳೆಗೆ ಕುಟುಂಬಸ್ಥರು ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿಯಾಗಿ ಮದುವೆ ಮಾಡಿಸಿದ್ದರು.
ಮದುವೆಯಾದ ಒಂದು ವಾರ ಸುಮ್ಮನಿದ್ದ ಗಂಡ ಎರಡನೇ ವಾರ ಪತ್ನಿಗೆ ಖಾಸಗಿ ಆಸ್ಪತ್ರೆಗೆ ಹೋಗಿ ಕನ್ಯತ್ವ ಪರೀಕ್ಷೆ ಮಾಡಿಸುವಂತೆ ಹಾಗೂ ಪ್ರತಿದಿನ ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳುವಂತೆ ಪೀಡಿಸುತ್ತಿದ್ದನಂತೆ. ಅಷ್ಟು ಮಾತ್ರವಲ್ಲದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಹಣವನ್ನೆಲ್ಲ ಗಂಡನ ಮನೆಯವರೇ ಲಪಟಾಯಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.