ಕರ್ನಾಟಕ

karnataka

ETV Bharat / state

ಸಿದ್ರಾಮುಲ್ಲಾ ಖಾನ್ ಎಂದಿದ್ದಕ್ಕೆ ಖುಷಿಪಡುವೆ: ಸಿದ್ದರಾಮಯ್ಯ - ನಾನು ಮಾಡಿದ ಕೆಲಸ ಗುರುತಿಸಿ ಸಿದ್ರಾಮುಲ್ಲಾ ಖಾನ್

ಮುಸ್ಲಿಮ್ ಸಮುದಾಯಕ್ಕೆ ನಾನು ಮಾಡಿದ ಕೆಲಸ ಗುರುತಿಸಿ ಸಿದ್ರಾಮುಲ್ಲಾ ಖಾನ್ ಎಂದು ಕರೆದರೆ ಅದಕ್ಕೆ ಖುಷಿಪಡುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

I am happy to be called Sidramulla Khan said Siddaramaiah
ಸಿದ್ದರಾಮಯ್ಯ

By

Published : Dec 7, 2022, 2:06 PM IST

ಬೆಂಗಳೂರು:ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯ ಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಇಂತಹ ಅಪ ಪ್ರಚಾರವಲ್ಲದೇ ಅವರಾದರೂ ಬೇರೆ ಏನು ಮಾಡಲು ಸಾಧ್ಯ? ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳನ ಮಸಿ ಬಳಿದುಕೊಂಡ ಮುಖವನ್ನು ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ? ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿ ಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆ ಸೂಚಿಸುತ್ತದೆ ಎಂದು ಉತ್ತರಿಸಿದ್ದಾರೆ.

ನೈತಿಕ ಅಧ:ಪತನ: ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಪಕ್ಷ ಇಂತಹ ನೈತಿಕ ಅಧ:ಪತನಕ್ಕೆ ಬಿದ್ದಿರುವುದರ ಬಗ್ಗೆ ನಾವೆಲ್ಲ ಸಾಮೂಹಿಕವಾಗಿ ಸಂತಾಪ ಸೂಚಿಸೋಣ. ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ ಇರುವ ಸಂತ ಶಿಶುನಾಳ ಷರೀಪರ ಪರಂಪರೆ ನಮ್ಮದು ಎಂದು ಹೇಳಿದ್ದಾರೆ.

ಮುಸ್ಲಿಮ್​ ಸೇವೆಗೆ ಇಟ್ಟ ಹೆಸರು: ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಸಂತ ರಮಾನಂದರ ಶಿಷ್ಯತ್ವವನ್ನು ಒಪ್ಪಿಕೊಂಡು ಜಗಮೆಚ್ಚಿದ ಸೂಫಿ ಕವಿ ಕಬೀರನೂ ನಮ್ಮದೇ ಪರಂಪರೆಯವರು. ಆದ್ದರಿಂದ ಮುಸ್ಲಿಮ್ ಹೆಸರನ್ನು ನನ್ನ ಹೆಸರಿಗೆ ಜೋಡಿಸುವ ಮೂಲಕ ಜಾತ್ಯತೀತತೆಯ ಮೇಲಿನ ನನ್ನ ನಂಬಿಕೆಯನ್ನು ಅವರು ಪುರಸ್ಕರಿಸಿದ್ದಾರೆಂದು ಎಂದು ತಿಳಿದುಕೊಳ್ಳುವೆ.

ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ಅನ್ನರಾಮಯ್ಯ, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಮ್ ಸಮುದಾಯಕ್ಕೆ ನಾನು ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ ಎಂದಿದ್ದಾರೆ.

ಇದನ್ನೂ ಓದಿ:ಸಿದ್ರಾಮುಲ್ಲಾ ಖಾನ್ ಹೆಸರು ಬಳಕೆ: ಬಿಜೆಪಿಯ ಸಂಸ್ಕೃತಿಯನ್ನು ಸ್ವಷ್ಟವಾಗಿ ತೋರಿಸುತ್ತಿದೆ.. ವೀರಪ್ಪ ಮೊಯ್ಲಿ

ABOUT THE AUTHOR

...view details