ಬೆಂಗಳೂರು: ಅಮೂಲ್ಯ ಆಗಲಿ, ಮತ್ಯಾರೇ ಆಗಲಿ ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಡಿಕೆಶಿ - ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದ ಡಿಕೆಶಿ
ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದು, ಆಕೆ ಪಾಕಿಸ್ತಾನದ ಪರ ಘೋಷಣೆ ಹಾಕಿದ ಬಗ್ಗೆ ಹೆಚ್ಚಿನ ತನಿಖೆ ಆಗಬೇಕು. ದೇಶ ವಿರೋಧಿ ಚಟುವಟಿಕೆಗೆ ಯಾವುದೇ ವೇದಿಕೆ ಆಗಲಿ ದುರ್ಬಳಕೆ ಆಗಬಾರದು. ದೇಶಭಕ್ತಿ, ದೇಶ ಕಟ್ಟುವ ವಿಚಾರದಲ್ಲಿ ಎಲ್ಲಾ ಭಾರತೀಯರ ಅಭಿಪ್ರಾಯವೂ ಒಂದೇ ಎಂದಿದ್ದಾರೆ.
ಅಮುಳ್ಯ ಬಗ್ಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ
ಈ ಕುರಿತು ಟ್ವೀಟ್ ಮಾಡಿರುವ ಅವರು, ಆಕೆ ಪಾಕಿಸ್ತಾನದ ಪರ ಘೋಷಣೆ ಹಾಕಿದ ಬಗ್ಗೆ ಹೆಚ್ಚಿನ ತನಿಖೆ ಆಗಬೇಕು. ದೇಶ ವಿರೋಧಿ ಚಟುವಟಿಕೆಗೆ ಯಾವುದೇ ವೇದಿಕೆ ಆಗಲಿ ದುರ್ಬಳಕೆ ಆಗಬಾರದು. ದೇಶಭಕ್ತಿ, ದೇಶ ಕಟ್ಟುವ ವಿಚಾರದಲ್ಲಿ ಎಲ್ಲಾ ಭಾರತೀಯರ ಅಭಿಪ್ರಾಯವೂ ಒಂದೇ ಎಂದಿದ್ದಾರೆ.
ನಿನ್ನೆ ಬೆಂಗಳೂರಲ್ಲಿ ನಡೆಯುತ್ತಿದ್ದ ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಅಮೂಲ್ಯ ಎಂಬ ಯುವತಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಹಾಕಿದ್ದಳು. ಈ ಹಿನ್ನೆಲೆ ಇಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಅಮೂಲ್ಯಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.