ಬೆಂಗಳೂರು:ಮಿಂಟೋ ಆಸ್ಪತ್ರೆ ವೈದ್ಯರ ಪ್ರತಿಭಟನೆಗೆ ಅಲ್ಲಿನ ಹೆಚ್ಒಡಿಗಳೇ ಕುಮ್ಮಕ್ಕು ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರೆಡಿಯೋಲಾಜಿ ವಿಭಾಗದ ಮುಖ್ಯಸ್ಥ ಡಾ. ರವಿ, ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ: ಡಾ. ರವಿ ಸ್ಪಷ್ಟನೆ - ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಟೀಚರ್ ಅಸೋಸಿಯೇಷನ್
ಮಿಂಟೋ ಆಸ್ಪತ್ರೆ ವೈದ್ಯರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ರೆಡಿಯೋಲಾಜಿ ವಿಭಾಗದ ಮುಖ್ಯಸ್ಥ ಡಾ. ರವಿ, ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ನಾನು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಟೀಚರ್ ಅಸೋಸಿಯೇಷನ್ನ ಜನರಲ್ ಸೆಕ್ರೆಟರಿಯಾಗಿದ್ದೇನೆ. ಭಾರತದ ಯಾವುದೇ ಮೂಲೆಯಲ್ಲಿ ವೈದ್ಯರ ಮೇಲೆ ಹಲ್ಲೆಯಾದ್ರು ಪ್ರತಿಭಟನೆ ಮಾಡುತ್ತಾ ಬಂದಿದ್ದೇವೆ. ಬೀದರ್ನಲ್ಲಿ ವೈದ್ಯರ ಮೇಲೆ ಹಲ್ಲೆಯಾದಾಗಲು ನಾನು ಪ್ರತಿಭಟನೆ ಮಾಡಿದ್ದೇನೆ. ಅದೇ ರೀತಿ ಸೆಕ್ರೆಟರಿ ಆಗಿ ನನ್ನ ವೈದ್ಯ ಮಿತ್ರರ ಮೇಲೆ ಹಲ್ಲೆಯಾದರೆ ನಾನು ಪ್ರತಿಭಟನೆ ನಡೆಸೋದು ಸೂಕ್ತ ಎಂದುಕೊಂಡಿದ್ದೇನೆ ಎಂದರು.
ಇನ್ನು ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ. ಈ ವಿಚಾರವಾಗಿ ಯಾವುದೇ ರಾಜಕೀಯ ಹೊಂದಾಣಿಕೆಯೂ ಇಲ್ಲ. ನಾನು ಬಿಜೆಪಿ ಅಥವಾ ಕಾಂಗ್ರೆಸ್ ಪರವಾಗಿಲ್ಲ. ಯಾವುದೇ ಪಕ್ಷದ ಪರವಾಗಿ ನಾನು ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.