ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರನ್ನು ನಾನು ಸೋಲಿಸಲಿಲ್ಲ. ಕಲಬುರಗಿ ಕ್ಷೇತ್ರದ ಮತದಾರರು ಸೋಲಿಸಿದ್ದಾರೆ ಎಂದು ಸಂಸದ ಉಮೇಶ್ ಜಾದವ್ ಹೇಳಿದರು.
ಖರ್ಗೆಯವರನ್ನು ಕಲಬುರಗಿ ಜನ ಸೋಲಿಸಿದ್ದಾರೆ, ನಾನಲ್ಲ: ಉಮೇಶ್ ಜಾಧವ್ - ಉಮೇಶ್ ಜಾದವ್
ರಾಜ್ಯದ ರಾಜಕೀಯ ಪರಿಸ್ಥಿತಿ ಗಂಭೀರವಾಗಿದೆ. ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನರಿಗೆ ನೀರು ಕೊಡುವ ಕೆಲಸ ಮಾಡಬೇಕು. ಹೀಗಾಗಿ ರಾಜ್ಯದಲ್ಲಿ ಜನಪರ ಕೆಲಸ ಮಾಡುವ ಸರ್ಕಾರ ಬೇಕು ಎಂದು ಸಂಸದ ಉಮೇಶ್ ಜಾಧವ್ ಹೇಳಿದ್ರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣದಲ್ಲಿ ಮಾತನಾಡಿದ ಅವರು, ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ದಲಿತ ಸಮುದಾಯದ ನಾಯಕ ಖರ್ಗೆ ಸಿಎಂ ಆದ್ರೆ ನಾನು ತಂಬಾ ಖುಷಿ ಪಡುತ್ತೇನೆ ಎಂದರು.
ರಾಜ್ಯದ ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ರಾಜ್ಯದಲ್ಲಿ ನೀರಿನ ಸಮಸ್ಯೆಯಿದ್ದು, ಜನರಿಗೆ ನೀರು ಕೊಡುವ ಕೆಲಸ ಮಾಡಬೇಕು. ಹೀಗಾಗಿ ರಾಜ್ಯದಲ್ಲಿ ಜನಪರ ಕೆಲಸ ಮಾಡುವ ಸರ್ಕಾರ ಬೇಕು ಎಂದರು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿಯುತ್ತೋ, ಉರುಳುತ್ತೋ ನನಗೆ ಗೊತ್ತಿಲ್ಲ. ಆದರೆ ಜನಪರ ಇರುವ ಸರ್ಕಾರ ಅಧಿಕಾರ ಹಿಡಿಯಲೇಬೇಕು ಎಂದು ಅಭಿಪ್ರಾಯಪಟ್ಟರು.