ಬೆಂಗಳೂರು: ಇಂದಿರಾ ಕ್ಯಾಂಟಿನ್ ಯೋಜನೆ ಸಂಬಂಧ ಸರ್ಕಾರ ಕೈಗೊಂಡ ತೀರ್ಮಾನದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಕಾಂಗ್ರೆಸ್ ಯೋಜನೆ ಸ್ಥಗಿತಗೊಳಿಸಿದರೆ ನೋಡಿ ಎಂದು ಎಚ್ಚರಿಕೆಯನ್ನೂ ನೀಡಿದೆ.
ಇನ್ನೊಂದೆಡೆ, ಬಿಜೆಪಿ ಸರ್ಕಾರವು ಇಂದಿರಾ ಕ್ಯಾಂಟೀನ್ ಮುಚ್ಚಲು ಹೊರಟಿದೆ ಎಂಬ ಸುದ್ದಿಗೆ ಡಿಸಿಎಂ ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ.
ಇಂದಿರಾ ಕ್ಯಾಂಟೀನ್ ಅವ್ಯವಹಾರಗಳು ಬಗ್ಗೆ ಮಾಧ್ಯಮಗಳ ಮೂಲಕ ಬೆಳಕಿಗೆ ಬಂದಿವೆ. ಕ್ಯಾಂಟೀನ್ನಲ್ಲಿ ನಡೆಯುತ್ತಿರುವ ಅಕ್ರಮ ಆಹಾರದ ಗುಣಮಟ್ಟದ ಬಗ್ಗೆ ವಿಚಾರಣೆ ಮಾಡಲಾಗುತ್ತಿದೆ ಅಷ್ಟೇ. ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಸ್ತಾಪ, ಪ್ರಯತ್ನ ಇಲ್ಲ. ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸ್ತೇವೆ ಅಷ್ಟೇ ಎಂದು ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅಶ್ವಥ್ ನಾರಾಯಣ
ಝೀರೋ ಟ್ರಾಫಿಕ್ ಬೇಡ:ಇನ್ನು ಡಿಸಿಎಂ ಆಗಿರೋ ಅಶ್ವಥ್ ನಾರಾಯಣ ಅವರು ಝೀರೋ ಟ್ರಾಫಿಕ್ ವ್ಯವಸ್ಥೆ ನನಗೆ ಬೇಡ. ನನ್ನಿಂದ ಜನತೆಗೆ ಅನಾನುಕೂಲ ಆಗಬಾರದು. ನಾನು ಸರಳವಾಗಿ ಜನರ ಮಧ್ಯೆ ಓಡಾಡ್ತೀನಿ ಎಂದು ತಿಳಿಸಿದ್ದಾರೆ.