ಬೆಂಗಳೂರು:ತಾವು ಪಕ್ಷಕ್ಕಾಗಿ ದುಡಿದಿದ್ದು, ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ಹಲವು ವರ್ಷಗಳಿಂದ ಪಕ್ಷಕ್ಕೆ ದುಡಿಯುತ್ತಿದ್ದೇನೆ. ಸುಮಾರು 15 -20 ವರ್ಷಗಳಿಂದ ಪಕ್ಷದ ಸಂಘಟನೆಗಾಗಿ ಕೆಲಸ ಮಾಡಿದ್ದೇನೆ. ನಾಯಕರು ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಇದೀಗ ಸಂಪುಟ ರಚನೆ ಆಗುತ್ತಿದ್ದು, ಪಕ್ಷದಲ್ಲಿ ನನ್ನ ಸೇವೆಯನ್ನು ಹೈಕಮಾಂಡ್ ಗುರುತಿಸುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.