ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಬಗ್ಗೆ ಅನರ್ಹ ಶಾಸಕ ಹೆಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದು, ಮುಂದಿನ ದಿನಗಳಲ್ಲಿ ಸಚಿವರಾಗುವ ಭರವಸೆ ಹೊಂದಿರುವುದಾಗಿ ಹೇಳಿದ್ದಾರೆ.
ಸಿಗದ ಸಚಿವ ಸ್ಥಾನ: ಭವಿಷ್ಯದ ಮೇಲೆ ಭರವಸೆ ಇಟ್ಟ ಹೆಚ್. ವಿಶ್ವನಾಥ್ - H.Vishwnath react to media
ಇಂದು ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಅನರ್ಹ ಶಾಸಕ ಹೆಚ್. ವಿಶ್ವನಾಥ್, ಮುಂದಿನ ದಿನಗಳಲ್ಲಿ ಸಚಿವರಾಗುವ ಭರವಸೆಯನ್ನು ಇಟ್ಟುಕೊಂಡಿದ್ದಾರೆ.
![ಸಿಗದ ಸಚಿವ ಸ್ಥಾನ: ಭವಿಷ್ಯದ ಮೇಲೆ ಭರವಸೆ ಇಟ್ಟ ಹೆಚ್. ವಿಶ್ವನಾಥ್ H.Vishwnath](https://etvbharatimages.akamaized.net/etvbharat/prod-images/768-512-5977106-thumbnail-3x2-ksv.jpg)
ಇಂದು ನಡೆದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸದ್ಯಕ್ಕೆ ನಾನು ಸಚಿವನಾಗದಿರಬಹುದು. ಆದ್ರೆ, ಇನ್ನು ಸಮಯವಿದ್ದು, ಮುಂದಿನ ದಿನಗಳಲ್ಲಿ ಖಂಡಿತ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದರು.
ಅಲ್ಲದೆ ಚುನಾವಣೆಯಲ್ಲಿ ಗೆದ್ದಿರುವ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ಇನ್ನು ಸೋತಿರುವ ನಿಮಗೆ ಸಚಿವ ಸ್ಥಾನ ಸಿಗುತ್ತ ಎಂಬ ಮಾಧ್ಯಮದವರ ಪ್ರಶ್ನೆಗೆ ಪತ್ರಿಕ್ರಿಯಿಸಿದ ವಿಶ್ವನಾಥ್ ಅವರು, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಸೇರಿದಂತೆ ಅನೇಕರು ಗೆದ್ದಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ನಮಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಹಳ ಸಮಾಧಾನದಿಂದ ಮನವರಿಕೆ ಮಾಡಿದ್ದಾರೆ ಎಂದು ತಿಳಿಸಿದರು.