ಬೆಂಗಳೂರು :ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕನ್ನಡ ಕಲಿಯುತ್ತಿರುವ ಸುದ್ದಿ ಕೇಳಿ ಬಹಳ ಸಂತೋಷವಾಯಿತು. ಅವರ ಕನ್ನಡ ಅಭಿಮಾನ ಶ್ಲಾಘನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹೊರ ರಾಜ್ಯಗಳಿಂದ ಬಂದು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ರಾಜ್ಯಪಾಲರ ನಡೆ ಪ್ರೇರಣೆಯಾಗಲಿ ಎಂದಿದ್ದಾರೆ.
ಕನ್ನಡ ಕಲಿಯುತ್ತಿರುವ ರಾಜ್ಯಪಾಲರ ಕನ್ನಡಾಭಿಮಾನ ಶ್ಲಾಘನೀಯ : ಹೆಚ್ ಡಿ ಕುಮಾರಸ್ವಾಮಿ - ಕರ್ನಾಟಕ ರಾಜ್ಯಪಾಲ
ರಾಜ್ಯದ ಎಲ್ಲಾ ಶಾಲೆಗಲ್ಲಿ ಕನ್ನಡ ಕಲಿಕೆ ಕಡ್ಡಾಯ ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣ ಸಂಬಂಧ ಹೆಚ್ಡಿಕೆ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ನಮ್ಮ ಭಾಷೆಯನ್ನು ಉಳಿಸಿಕೊಳ್ಳಲು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಮಹತ್ವವನ್ನು ಉನ್ನತ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದಿದ್ದಾರೆ..
ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಕಲಿಸುವುದನ್ನು ವಿರೋಧಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿರುವುದು ನನ್ನ ಗಮನಕ್ಕೆ ಬಂದಿದೆ. ಇದರ ವಿರುದ್ಧ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನ್ಯಾಯಾಲಯದಲ್ಲಿ ವಾದಿಸಿ, ನಮ್ಮ ಭಾಷೆಯನ್ನು ಉಳಿಸಿಕೊಳ್ಳಲು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಮಹತ್ವವನ್ನು ಉನ್ನತ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕೆಂದು ನಾನು ಮಾನ್ಯ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ ಮೀಸಲಾತಿಗೆ ಕ್ರಮ : ಸಿಎಂ ಬೊಮ್ಮಾಯಿ