ಬೆಂಗಳೂರು: ಮೈತ್ರಿ ಸರ್ಕಾರದ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮುಂಬೈ ಸೇರಿರುವ ಪಕ್ಷೇತರ ಶಾಸಕರನ್ನು ನಿನ್ನೆ ಬಿಜೆಪಿ ನಾಯಕರಾದ ಆರ್.ಅಶೋಕ್, ಕೆ.ಜಿ.ಬೋಪಯ್ಯ ಭೇಟಿ ಮಾಡಿದ್ದಾರೆ. ಈ ವಿಚಾರವಾಗಿ 'ಈಟಿವಿ ಭಾರತ'ಕ್ಕೆ ಪ್ರತಿಕ್ರಿಯಿಸಿದ ಶಾಸಕ ಆರ್.ಅಶೋಕ್, ಪಕ್ಷೇತರ ಶಾಸಕರಾದ ನಾಗೇಶ್ ಅವರನ್ನು ಭೇಟಿ ಮಾಡಲೆಂದು ನಾನು ಮುಂಬೈಗೆ ಹೋಗಿದ್ದೆ. ನಾಗೇಶ್ ಅವರು ಸಹ ಬಿಜೆಪಿಗೆ ಬೆಂಬಲ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ನಾನು ಮುಂಬೈಗೆ ಹೋಗಿದ್ದ ಕಾರಣ ಇದಲ್ಲದೆ ಬೇರಾವುದು ಅಲ್ಲ. ಮುಂಬೈನಲ್ಲಿ ಬೇರೆ ಯಾರನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು.
ನಾಗೇಶ್ ಭೇಟಿಗೆ ಮುಂಬೈಗೆ ಹೋಗಿದ್ದೆ, ಬಿಜೆಪಿಗೆ ಬೆಂಬಲ ಕೊಡಲು ಒಪ್ಪಿದ್ದಾರೆ: ಆರ್.ಅಶೋಕ್ - undefined
ಮೈತ್ರಿ ಸರ್ಕಾರದಿಂದ ಬೇಸತ್ತ ಅತೃಪ್ತ ಶಾಸಕರಲ್ಲೊಬ್ಬರಾದ ನಾಗೇಶ್ರನ್ನು ನಿನ್ನೆ ಆರ್.ಅಶೊಕ್ ಭೇಟಿ ಮಾಡಿದ್ದರು.
ಕಾಂಗ್ರೆಸ್ ಶಾಸಕರ ರಾಜೀನಾಮೆ ವಿಚಾರದ ಬಗ್ಗೆ ಸಂಜೆಯೊಳಗೆ ಸ್ಪೀಕರ್ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅರ್.ಅಶೋಕ್, ಇದೊಂದು ಉತ್ತಮ ಬೆಳವಣಿಗೆ. ಸ್ಪೀಕರ್ ಅವರು ಬೇಗ ಈ ನಿರ್ಧಾರ ತೆಗೆದುಕೊಂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಸುಪ್ರೀಂ ಕೋರ್ಟ್ನಿಂದ ಹೇಳಿಸಿಕೊಂಡು ನಿರ್ಧಾರ ತೆಗೆದುಕೊಳ್ಳುವಂತಹ ಪರಿಸ್ಥಿತಿ ಸ್ಪೀಕರ್ ಅವರಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು. ಅಲ್ಲದೆ ವಿಧಾನಸಭೆಯಲ್ಲಿ ದೋಸ್ತಿ ಸರ್ಕಾರದ ಸಂಖ್ಯಾಬಲ ಕುಸಿದಿದ್ದು, ಮುಖ್ಯಮಂತ್ರಿಗಳಿಗೆ ಮಾನ ಮರ್ಯಾದೆ ಎಂಬುದು ಇದ್ದರೆ ರಾಜೀನಾಮೆ ನೀಡಬೇಕಿತ್ತು. ಅವರಿಗೆ ಅವ್ಯಾವುದು ಇಲ್ಲ. ಅದಕ್ಕೆ ವಿಧಾನಸೌಧದಲ್ಲಿ ಕೂತಿದ್ದಾರೆ. ಕಳೆದ ಬಾರಿ ವಿಧಾನಸಭೆಯಲ್ಲಿ ಬಹುಮತ ಇಲ್ಲದ ಕಾರಣ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಮುಖ್ಯಮಂತ್ರಿಗಳು ಕೂಡ ಗೌರವಯುತವಾಗಿ ರಾಜೀನಾಮೆ ಕೊಡಬೇಕು. ಮೈತ್ರಿ ಸರ್ಕಾರಕ್ಕೆ ಬಹುಮತ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಜನರು ಕೂಡ ಅವರ ರಾಜೀನಾಮೆ ಬಗ್ಗೆಯೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.
ಇನ್ನು ಕಾಂಗ್ರೆಸ್ನ ರೆಬೆಲ್ ಶಾಸಕರು ರಾಜೀನಾಮೆ ನೀಡಿರುವ ವಿಚಾರವಾಗಿ ಆಪರೇಷನ್ ಕಮಲ ಎಂಬ ಮಾತು ಕೇಳಿಬರುತ್ತಿದೆ ಎಂದಿದ್ದಕ್ಕೆ, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವುದಕ್ಕೂ ನಮಗೂ ಸಂಬಂಧ ಇಲ್ಲ. ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ, ಮಾಡೋದು ಇಲ್ಲ. ಅದು ಅವರ ಆಂತರಿಕ ಜಗಳ. ದೇವೇಗೌಡರನ್ನು ಸಿದ್ಧರಾಮಯ್ಯ ಸೋಲಿಸಿದರು, ಸಿದ್ದರಾಮಯ್ಯ ಅವರನ್ನು ದೇವೇಗೌಡ ಸೋಲಿಸಿದರು. ಅವರ ಒಳಜಗಳದಿಂದ ಸರ್ಕಾರ ಪತನವಾಗಿದೆ ಎಂದು ಹೇಳಿದ ಅರ್.ಅಶೋಕ್, ಬಿಜೆಪಿ ಸರ್ಕಾರ ರಚಿಸುವ ಬಗ್ಗೆ ಇನ್ನು ಗೊತ್ತಿಲ್ಲ. ಯೋಚನೆ ಮಾಡುತ್ತೇವೆ ಎಂಬ ಹಾರಿಕೆ ಉತ್ತರ ನೀಡಿದರು.