ಕರ್ನಾಟಕ

karnataka

ETV Bharat / state

ಆರೇಳು ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿಯೇ ಮುಖ್ಯಮಂತ್ರಿ: ಹೆಚ್​​ಡಿಕೆ - ಕ್ಷೇತ್ರ

ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಮುಂದಿನ ಬಾರಿ ನಾನೇ ಸಿಎಂ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆರೇಳು ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ: ಹೆಚ್​​ಡಿಕೆ
ಆರೇಳು ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ: ಹೆಚ್​​ಡಿಕೆ

By

Published : Aug 14, 2022, 8:40 PM IST

ಬೆಂಗಳೂರು: ಮುಂದಿನ 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ರಾಷ್ಟ್ರೀಯ ಪಕ್ಷಗಳು ನಮ್ಮ ಪಕ್ಷವನ್ನು ಲಘುವಾಗಿ ಕಾಣುತ್ತಿವೆ. ನಮ್ಮ ಶಕ್ತಿ ಏನೆಂದು ವಿಧಾನಸಭೆ ಚುನಾವಣೆ ನಡೆದ ನಂತರ ಗೊತ್ತಾಗಲಿದೆ. ಗುಪ್ತಗಾಮಿನಿಯಂತೆ ಪಕ್ಷದ ಪರವಾಗಿ ಜನರ ಒಲವು ವ್ಯಕ್ತವಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳ ರಾಜಕೀಯ ಚೇಷ್ಟೆಗಳನ್ನು ನೋಡಿರುವ ಕನ್ನಡಿಗರು ರೋಸಿ ಹೋಗಿದ್ದಾರೆ ಎಂದು ಹರಿಹಾಯ್ದರು.

ಬಿಬಿಎಂಪಿ ವಾರ್ಡ್ ಮೀಸಲಾತಿಯನ್ನು ಬಿಜೆಪಿ ಸರ್ಕಾರ ತನಗೆ ಬೇಕಾದ ರೀತಿ ಮಾಡಿಕೊಂಡಿದೆ. ಅದೇನೇ ಆದರೂ ನಾವು ದಾಸರಹಳ್ಳಿ ಕ್ಷೇತ್ರದಲ್ಲಿ 10 ವಾರ್ಡ್ ಆದರೂ ಗೆಲ್ಲಲೇಬೇಕು. ಬಿಜೆಪಿ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಕೊವಿಡ್​​ನಿಂದ ಮೃತಪಟ್ಟವರಿಗೆ ಪರಿಹಾರ ಹಣ ಕೊಡುತ್ತೇವೆ ಎಂದು ಹೇಳಿ ಆಮೇಲೆ ಏನೂ ನೀಡಲಿಲ್ಲ. ಬೆಂಗಳೂರಿನಲ್ಲಿ ಯಾವುದೇ ಕೆಲಸ ಮಾಡದೇ ಹಣ ಲೂಟಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಆಡಳಿತ ನಡೆಸಿ ಹೇಗೆ ನಡೆದುಕೊಂಡಿವೆ ಎನ್ನುವುದನ್ನು ಜನ ನೋಡಿದ್ದಾರೆ. ನಮಗೂ ಒಂದು ಅವಕಾಶ ಕೊಡಿ. ದಾಸರಹಳ್ಳಿಯನ್ನು ಮಾದರಿ ವಿಧಾನಸಭಾ ಕ್ಷೇತ್ರವಾಗಿ ಮಾಡುತ್ತೇವೆ. ನಿಮ್ಮ ದುಡಿಮೆಯ ಋಣದ ಭಾರವನ್ನು ಇಟ್ಟೀದ್ದೀರಾ. ಅದಕ್ಕೆ ಗೌರವ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು ಕುದ್ರೋಳಿ ಕ್ಷೇತ್ರದಲ್ಲಿ 900 ಕೆಜಿ ಧಾನ್ಯಗಳಿಂದ ಅರಳಿದ ಬೃಹತ್ ತಿರಂಗಾ

ABOUT THE AUTHOR

...view details