ಕರ್ನಾಟಕ

karnataka

ETV Bharat / state

28 ಕ್ಷೇತ್ರಗಳಲ್ಲೂ ಪ್ರಚಾರ ಕಾರ್ಯ ನಡೆಸಲಿದ್ದೇನೆ: ಸಿದ್ದರಾಮಯ್ಯ ಟ್ವೀಟ್​​​ - undefined

ಮಂಡ್ಯ, ಹಾಸನ, ತುಮಕೂರು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋಗುವ ಸಂಬಂಧ ಇದ್ದ ಗೊಂದಲಕ್ಕೆ ಸಿದ್ದರಾಮಯ್ಯ ತೆರೆ. 28 ಕ್ಷೇತ್ರಗಳಲ್ಲೂ ಪ್ರಚಾರ ನಡೆಸುವುದಾಗಿ ಟ್ವೀಟ್.

ಸಿದ್ದರಾಮಯ್ಯ

By

Published : Mar 29, 2019, 7:14 PM IST

ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ನಡೆಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿನಿಧಿಸುವ 28 ಕ್ಷೇತ್ರಗಳಲ್ಲೂ ಪ್ರಚಾರ ನಡೆಸುತ್ತೇನೆ. ಎರಡೂ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಆ ಮೂಲಕ ಮಂಡ್ಯ, ಹಾಸನ, ತುಮಕೂರು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋಗುವ ಸಂಬಂಧ ಇದ್ದ ಗೊಂದಲಕ್ಕೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ನಡುವೆ ಯಾವುದೇ ಗೊಂದಲಗಳಿಲ್ಲ. ಎರಡೂ ಪಕ್ಷದ ಕಾರ್ಯಕರ್ತರು ಬಿಜೆಪಿ ಮತೀಯ ಸಿದ್ಧಾಂತದ ವಿರುದ್ಧವಿದ್ದಾರೆ. ಬಿಜೆಪಿ ಜೊತೆಗೆ ಕೈ ಜೋಡಿಸುವ ಯಾವುದೇ ಪ್ರೆಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details