ಕರ್ನಾಟಕ

karnataka

ಸಂಪುಟ ವಿಸ್ತರಣೆ, ಉಪ ಚುನಾವಣಾ ಅಭ್ಯರ್ಥಿ ಆಯ್ಕೆ ಕುರಿತು ವರಿಷ್ಠರ ಜೊತೆ ಚರ್ಚೆ: ಸಿಎಂ

ಹೈಕಮಾಂಡ್ ಆಹ್ವಾನದ ಮೇರೆಗೆ ದೆಹಲಿಗೆ ತೆರಳುತ್ತಿದ್ದೇನೆ. ಬಸವ ಕಲ್ಯಾಣ, ಮಸ್ಕಿ ವಿಧಾನಸಭೆ, ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ವರಿಷ್ಠರ ಜತೆ ಚರ್ಚೆ ನಡೆಸಲಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

By

Published : Jan 10, 2021, 8:38 AM IST

Published : Jan 10, 2021, 8:38 AM IST

Updated : Jan 10, 2021, 9:18 AM IST

CM BS Yaduyurappa
ಸಂಪುಟ ವಿಸ್ತರಣೆ, ಉಪ ಚುನಾವಣಾ ಅಭ್ಯರ್ಥಿ ಆಯ್ಕೆ ಕುರಿತು ವರಿಷ್ಠರ ಜೊತೆ ಚರ್ಚೆ: ಸಿಎಂ

ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ, ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಷಯಗಳ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಿ ರಾತ್ರಿ ಬೆಂಗಳೂರಿಗೆ ವಾಪಸ್ಸಾಗುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಹೈಕಮಾಂಡ್ ಆಹ್ವಾನದ ಮೇರೆಗೆ ದೆಹಲಿಗೆ ತೆರಳುತ್ತಿದ್ದೇನೆ: ಸಿಎಂ ಬಿ.ಎಸ್. ಯಡಿಯೂರಪ್ಪ

ದೆಹಲಿಗೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಆಹ್ವಾನದ ಮೇರೆಗೆ ದೆಹಲಿಗೆ ತೆರಳುತ್ತಿದ್ದೇನೆ, ಬಸವ ಕಲ್ಯಾಣ, ಮಸ್ಕಿ ವಿಧಾನಸಭೆ, ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲಾಗುತ್ತದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಿದ್ದು, ಇದರ ಬಗ್ಗೆಯೂ ಮಾಹಿತಿ ನೀಡಿ ಕೇಂದ್ರದ ನಾಯಕರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಓದಿ:ಬಿಎಸ್​ವೈಗೆ ಹೈಕಮಾಂಡ್ ಬುಲಾವ್, ನಾಳೆ ದೆಹಲಿಯತ್ತ ಸಿಎಂ: ಸಂಪುಟ ವಿಸ್ತರಣೆ ಚರ್ಚೆ ಸಾಧ್ಯತೆ!

ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸುತ್ತೇನೆ, ಆದರೆ ಈ ವಾರದಲ್ಲೇ ಸಂಪುಟ ವಿಸ್ತರಣೆ ಆಗುತ್ತದೆಯೇ ಎನ್ನುವುದು ಗೊತ್ತಿಲ್ಲ. ಹೈಕಮಾಂಡ್ ನಿರ್ಧಾರದ ಮೇಲೆ ಅವಲಂಬಿಸಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

Last Updated : Jan 10, 2021, 9:18 AM IST

ABOUT THE AUTHOR

...view details