ಬೆಂಗಳೂರು:ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿಯ ಎಲ್ಲ ಶಾಸಕರಿಗೂ ಕೊಟ್ಟ ಭರವಸೆ ಈಡೇರಿಸುತ್ತೇನೆ. ಹಾಗೆಯೇ ಸೋತ ಅಭ್ಯರ್ಥಿಗಳ ಬಗ್ಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಿಎಂ ಎಸ್.ನಿಜಲಿಂಗಪ್ಪ 117ನೇ ಜನ್ಮಾದಿನಾಚರಣೆ ಹಿನ್ನೆಲೆ ವಿಧಾನಸೌಧದಲ್ಲಿನ ನಿಜಲಿಂಗಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಎಲ್ಲರೂ ಮಂತ್ರಿ ಆಗ್ತಾರೆ. ಅವರ ರಾಜೀನಾಮೆಯಿಂದಲೇ ಸರ್ಕಾರ ಬಂದಿದೆ. ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ. ಈ ಬಗ್ಗೆ ದೆಹಲಿ ವರಿಷ್ಠರಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದ ಅವರು, ಸಿದ್ದರಾಮಯ್ಯ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ವಿಚಾರಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಇದೇ ವೇಳೆ ತಿಳಿಸಿದರು.