ಕರ್ನಾಟಕ

karnataka

ETV Bharat / state

ಸಾಮೂಹಿಕ ನಾಯಕತ್ವದಡಿ ಉಪಚುನಾವಣೆ ಎದುರಿಸುವ ಬಗ್ಗೆ ಮುನಿಯಪ್ಪ ಹೇಳಿದ್ರು ಈ ಮಾತು! - I will tell how to face by election in seniour leader meeting

ರಾಜ್ಯದಲ್ಲಿನ ಉಪಚುನಾವಣೆ ಎದುರಿಸುವ ಬಗ್ಗೆ ಮಾತನಾಡಿರುವ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸಾಮೂಹಿಕ ನಾಯಕತ್ವದಡಿ ಎಲ್ಲ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆ.ಎಚ್.ಮುನಿಯಪ್ಪ

By

Published : Oct 18, 2019, 4:45 PM IST

ಬೆಂಗಳೂರು: 21ಕ್ಕೆ ಸಿಎಲ್​ಪಿ ಮುಖಂಡರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಲ್ಲಿ ಸಾಮೂಹಿಕ ನಾಯಕತ್ವದಡಿ ಉಪಚುನಾವಣೆ ಎದುರಿಸುವ ಬಗ್ಗೆ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಲ್‌ಪಿ ನಾಯಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ವಿಚಾರಗಳನ್ನು ನಾನು ಪ್ರಸ್ತಾಪಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಾಮೂಹಿಕ ನಾಯಕತ್ವದಡಿ ಎಲ್ಲಾ ವಿಷಯಗಳ ಕುರಿತು ಚರ್ಚಿಸಲಾಗುವುದು
ಸಿದ್ದರಾಮಯ್ಯ ಅವರು ರಮೇಶ್ ಕುಮಾರ್ ‌ರನ್ನು ಪಕ್ಕದಲ್ಲೇ ಕೂರಿಸಿಕೊಂಡು ಓಡಾಡುತ್ತಿದ್ದಾರೆ ಅನ್ನೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಮೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಹೇಳಿದ್ದೇನೆ ಅಷ್ಟೇ ಎಂದು ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದರು.ಇದೇ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮುನಿಯಪ್ಪ, ಏಕಾಏಕಿ ಆಯ್ಕೆ ಮಾಡುವುದು ಬೇಡ, ಇಬ್ಬರು ವೀಕ್ಷಕರನ್ನು ನೇಮಕ ಮಾಡಿ, ಅವರನ್ನು ಸ್ವತಂತ್ರವಾಗಿ ಆಯ್ಕೆ ಮಾಡಲು ಬಿಡಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ABOUT THE AUTHOR

...view details