ಕರ್ನಾಟಕ

karnataka

ETV Bharat / state

ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಐಎಎಸ್ ಮನೋಜ್ ಕುಮಾರ್ ಮೀನಾ ನೇಮಕ ಬಹುತೇಕ ಖಚಿತ - ಮುಖ್ಯ ಚುನಾವಣಾಧಿಕಾರಿಯಾಗಿ ಐಎಎಸ್ ಮನೋಜ್ ಕುಮಾರ್ ಮೀನಾ ನೇಮಕ

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಗೆ ಉಸ್ತುವಾರಿ ನೀಡಲಾಗಿದೆ. ಹೊಸ ಮುಖ್ಯ ಚುನಾವಣಾಧಿಕಾರಿ ಅಧಿಕಾರ ಸ್ವೀಕರಿಸುವವರೆಗೆ ಪ್ರಿಯಾಂಕಾ ಅವರು ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ..

ias-manoj-kumar-meena
ಐಎಎಸ್ ಮನೋಜ್ ಕುಮಾರ್

By

Published : Oct 4, 2021, 10:43 PM IST

ಬೆಂಗಳೂರು :ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಸಂಜೀವ್‌ಕುಮಾರ್ ಅವರು ಸೆಪ್ಟೆಂಬರ್ 30ರಂದು ನಿವೃತ್ತಿ ಹೊಂದಿದ ಹಿನ್ನೆಲೆ ಅವರ ಸ್ಥಾನಕ್ಕೆ ಐಎಎಸ್​​ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರ ನೇಮಕವು ಬಹುತೇಕ ಖಚಿತವಾಗಿದೆ. ಸದ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಬೇಕಾಗಿದೆ.

2003ರ ಬ್ಯಾಚ್​ನ ರಾಜ್ಯದ ಐಐಎಸ್ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು, ಪ್ರಸ್ತುತ ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಂಜೀವ್ ಕುಮಾರ್ ಅವರು ಸೇವೆಯಿಂದ ನಿವೃತ್ತಿಯಾಗಿದ್ದಾರೆ.

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಗೆ ಉಸ್ತುವಾರಿ ನೀಡಲಾಗಿದೆ. ಹೊಸ ಮುಖ್ಯ ಚುನಾವಣಾಧಿಕಾರಿ ಅಧಿಕಾರ ಸ್ವೀಕರಿಸುವವರೆಗೆ ಪ್ರಿಯಾಂಕಾ ಅವರು ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಸಂಜೀವ್ ಕುಮಾರ್ ಅವರು 2018ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆ ಮತ್ತು ಉಪಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಚುನಾವಣೆ ವೇಳೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕೆ ರಾಷ್ಟ್ರಪತಿ ಅವರಿಂದ ಪ್ರಶಸ್ತಿ ಮತ್ತು ಇವಿಎಂ, ವಿವಿಪ್ಯಾಟ್‌ಗಳ ಬಳಕೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿಯೂ ಅವರು ಪ್ರಶಸ್ತಿ ಪಡೆದುಕೊಂಡಿದ್ದರು.

ABOUT THE AUTHOR

...view details