ಕರ್ನಾಟಕ

karnataka

ETV Bharat / state

ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಅವಕಾಶ: ಸುಪ್ರೀಂನಲ್ಲಿ ಇಂದು ವಕ್ಫ್​​ ಮಂಡಳಿ ಅರ್ಜಿ ವಿಚಾರಣೆ - ಈದ್ಗಾ ಮೈದಾನದಲ್ಲಿ ಸ್ವತಂತ್ರೋತ್ಸವ ಮತ್ತು ಗಣರಾಜ್ಯೋತ್ಸವ

ಹೈಕೋರ್ಟ್ ವಿಭಾಗೀಯ ಪೀಠ ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಮಾಡಿಕೊಡುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಕ್ಫ್ ಮಂಡಳಿ ಮೇಲ್ಮನವಿ ಸಲ್ಲಿಸಿತ್ತು.

idga-maidan-hearing-in-supreme-court-today
ಸುಪ್ರೀಂನಲ್ಲಿ ಇಂದು ವಕ್ಫ ಮಂಡಳಿ ಅರ್ಜಿ ವಿಚಾರಣೆ

By

Published : Aug 30, 2022, 9:09 AM IST

ಬೆಂಗಳೂರು:ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಸೇರಿದಂತೆ ಧಾರ್ಮಿಕ ಚಟುವಟಿಕೆಗೆ ಅವಕಾಶ ಮಾಡಿಕೊಟ್ಟಿರುವ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ವಕ್ಫ ಮಂಡಳಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕ್ರತಿಕ ಚಟುವಟಿಕೆಗಳನ್ನು ನಿರ್ದಿಷ್ಟ ಅವಧಿಗೆ ನಡೆಸಲು ಅನುಮತಿ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ವಕ್ಫ್ ಮಂಡಳಿ ಪ್ರಶ್ನಿಸಿದ್ದು, ಈ ಸಂಬಂಧ ತುರ್ತಾಗಿ ವಿಚಾರಣೆ ನಡೆಸುವಂತೆ ಕೋರಿದೆ.

ಸೋಮವಾರ ಸುಪ್ರೀಂ ಕೋರ್ಟಿನಲ್ಲಿ ವಕ್ಫ್ ಮಂಡಳಿ ಪರವಾಗಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ತುರ್ತಾಗಿ ಮೇಲ್ಮನವಿ ವಿಚಾರಣೆ ನಡೆಸಬೇಕೆಂದು ಕೋರಿದ್ದರಿಂದ ಮುಖ್ಯ ನ್ಯಾಯಮೂರ್ತಿ ಯು ವಿ ಲಲಿತ್ ಮತ್ತು ನ್ಯಾ. ಎಸ್. ರವೀಂದ್ರ ಭಟ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಿಗದಿಪಡಿಸಿದೆ.

ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನಲ್ಲಿ ವಿಚಾರಣೆ ಇನ್ನೂ ಬಾಕಿ ಇರುವಾಗಲೇ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡಿರುವುದು ಸಮಂಜಸವಲ್ಲ ಎಂದು ವಕ್ಫ್ ಬೋರ್ಡ್ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಪ್ರತಿಪಾದಿಸಿದೆ. ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ರದ್ದುಪಡಿಸಬೇಕು ಹಾಗೂ ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆ ನೀಡಬೇಕು ಎಂದು ಕೋರಿದೆ.

ವಿವಾದಿತ ಈದ್ಗಾ ಮೈದಾನದಲ್ಲಿ ಹೈ ಕೋರ್ಟ್​​​​ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ ಅವರು ಈದ್ಗಾ ಮೈದಾನದಲ್ಲಿ ಸ್ವತಂತ್ರೋತ್ಸವ ಮತ್ತು ಗಣರಾಜ್ಯೋತ್ಸವದಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಲು ಹಾಗೂ ರಂಜಾನ್, ಬಕ್ರೀದ್ ವೇಳೆ ಮುಸ್ಲಿಂ ಸಮುದಾಯಕ್ಕೆ ಪ್ರಾರ್ಥನೆ ಸಲ್ಲಿಸಲು ಆದೇಶಿಸಿತ್ತು.

ಆದರೆ, ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್​ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ಎಸ್. ವಿಶ್ವಜಿತ್ ಅವರಿದ್ದ ವಿಭಾಗೀಯ ಪೀಠ ಗಣೇಶೋತ್ಸವ ಆಚರಣೆಗೆ ಸಂಘ ಸಂಸ್ಥೆಗಳು ಕೋರಿದ ಅರ್ಜಿಯನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಅದೇಶಿಸಿತ್ತು.

ವಕ್ಫ್ ಬೋರ್ಡ ಈಗ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಗಣೇಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿರುವಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆಯುವ ವಿಚಾರಣೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ :ಈದ್ಗಾ ಮೈದಾನದ ಬಗ್ಗೆ ನಾಳೆ ಸುಪ್ರಿಂ ಕೋರ್ಟ್‌ನಲ್ಲಿ ವಿಚಾರಣೆ: ಪೊಲೀಸರಿಂದ ಪಥ ಸಂಚಲನ

ABOUT THE AUTHOR

...view details