ಬೆಂಗಳೂರು : ನಗರದ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಪ್ರಚಾರ ನಡೆಸಿದರು. ಪ್ರಚಾರದ ಕೊನೆ ದಿನವಾದ ಇಂದು ಎನ್.ಆರ್ ಕಾಲೋನಿ, ತ್ಯಾಗರಾಜನಗರ, ಬಸವನಗುಡಿ ಮತ್ತಿತರ ಕಡೆ ರೋಡ್ ಶೋ ನಡೆಸಿದ ಕುಮಾರಸ್ವಾಮಿ ಅವರು ತಮ್ಮ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.
ಇದನ್ನೂ ಓದಿ :ಜೆಡಿಎಸ್ನದ್ದು ಕುಟುಂಬಸ್ಥರ ನವರತ್ನ ಕಾರ್ಯಕ್ರಮ.. ಸಿದ್ದರಾಮಯ್ಯ ಮಜಾರಾಮಯ್ಯ: ಸಂಸದ ಶ್ರೀನಿವಾಸ್ ಪ್ರಸಾದ್
ಈ ವೇಳೆ ಮಾತನಾಡಿದ ಹೆಚ್ಡಿಕೆ, ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಚಿಂತನೆ ಇಲ್ಲ. ನಮ್ಮ ಪಕ್ಷದಿಂದ ಪಂಚರತ್ನ ಐದು ಯೋಜನೆಗಳನ್ನು ಜಾರಿಗೆ ತಂದು ಪ್ರತಿ ಕುಟುಂಬದ ಬದುಕಿಗೆ ಒಳ್ಳೆಯ ಕಾರ್ಯಕ್ರಮ ಕೊಡುತ್ತೇನೆ. ಗುರು ರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್ ನಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಪರಿಶೀಲಿಸಿ ಎಲ್ಲಾ ಸದಸ್ಯರಿಗೆ ಅನುಕೂಲವಾಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ರು.
ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದು ಆಕಸ್ಮಿಕವಾಗಿ. ರಾಜ್ಯದ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾದವನಲ್ಲ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಬಹುಮತ ಸಿಕ್ಕರೆ ಎಲ್ಲ ವರ್ಗದ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕುಮಾರಸ್ವಾಮಿ ಹೇಳಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬೆಂಗಳೂರಿಗೆ ಆನೇಕ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರಿನ ಜನರು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ ವಿಷಯ ಎಂದರೇ ಕಾವೇರಿ ನೀರನ್ನು ಬೆಂಗಳೂರಿಗೆ ತರುವಲ್ಲಿ ದೇವೇಗೌಡರ ಪಾತ್ರ ದೊಡ್ಡದಿದೆ. ಇದನ್ನೂ ಎಂದಿಗೂ ಮರೆಯಬಾರದು. ಸಿರ್ಸಿ ಫ್ಲೈಓವರ್ ಸೇರಿದಂತೆ ಹಲವಾರು ಯೋಜನೆಗಳನ್ನು ಮಾಡಿದ್ದಾರೆ ಎಂದರು.