ಕರ್ನಾಟಕ

karnataka

ETV Bharat / state

ತುರ್ತು ಅವಶ್ಯಕತೆ ಇದ್ದರೆ ಮಾತ್ರ ಆಸ್ಪತ್ರೆಗಳಿಗೆ ಭೇಟಿ ನೀಡಿ: ಸರ್ಕಾರದ ಅಧಿಸೂಚನೆ

ವೈದ್ಯಕೀಯ ಶಿಕ್ಷಣ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಕೊರೊನಾ ವೈರಸ್​​ನಿಂದ ಬಳಲುತ್ತಿರುವವರು ಮಾತ್ರ ಭೇಟಿ ನೀಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Government notification
ಜಾವಿದ್ ಅಕ್ತರ್

By

Published : Mar 18, 2020, 9:57 PM IST

ಬೆಂಗಳೂರು: ಕೊರೊನಾ ವೈರಸ್​​ನಿಂದ ಬಳಲುತ್ತಿರುವವರು ಮಾತ್ರ ವೈದ್ಯಕೀಯ ಶಿಕ್ಷಣ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವಿದ್ ಅಕ್ತರ್ ಆದೇಶ ಹೊರಡಿಸಿದ್ದಾರೆ.

ಬೇರೆ ಸಣ್ಣಪುಟ್ಟ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ಹಾಗೂ ಸಮಯೋಚಿತ ತಪಾಸಣೆಗಳಿಗೆ ಮುಂದಿನ ಸೂಚನೆಯವರೆಗೆ ನಿರ್ಬಂಧ ಹೇರಲಾಗಿದೆ. ಕೊರೊನಾ ಸೋಂಕಿತರ ತಪಾಸಣೆ ಮಾಡುವುದಕ್ಕೆ ಆಸ್ಪತ್ರೆಗಳಿಗೆ ಅನುವು ಮಾಡಿಕೊಡುವ ಉದ್ದೇಶದಿಂದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವಿದ್ ಅಕ್ತರ್ ಈ ಅಧಿಸೂಚನೆ ಹೊರಡಿಸಿದ್ದಾರೆ.

ABOUT THE AUTHOR

...view details