ಬೆಂಗಳೂರು :ರಾಜ್ಯ ಪೊಲೀಸ್ ಸಿಬ್ಬಂದಿಗೆ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಸಿಹಿ ಸುದ್ದಿ ನೀಡಿದ್ದಾರೆ. ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಣೆ ಮಾಡುವ ಪೊಲೀಸರು ಇನ್ಮುಂದೆ ಕ್ವಾರಂಟೈನ್‌ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸುವಂತೆ ಡಿಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಪೊಲೀಸರು ಕ್ವಾರಂಟೈನ್‌ಗೆ ಒಳಗಾದ್ರೆ ಕರ್ತವ್ಯದ ಅವಧಿ ಎಂದು ಪರಿಗಣನೆ; ಡಿಜಿ ಪ್ರವೀಣ್ ಸೂದ್ ಆದೇಶ - ಕರ್ತವ್ಯದ ಅವಧಿ
ಇತ್ತೀಚೆಗೆ ಕರ್ತವ್ಯ ನಿರ್ವಹಣೆ ಸಮಯದಲ್ಲಿ ಪೊಲೀಸರು ಸೋಂಕಿತರ ಜೊತೆ ಸಂಪರ್ಕಕ್ಕೆ ಬಂದಿರುತ್ತಾರೆ. ಹೀಗಾಗಿ ಸೋಂಕಿತರ ಜೊತೆ ಸಂಪರ್ಕ ಹೊಂದಿ ಕ್ವಾರಂಟೈನ್ ಆಗುತ್ತಿದ್ದಾರೆ.

ಪೊಲೀಸರು ಕ್ವಾರಂಟೈನ್‌ಗೆ ಒಳಗಾದ್ರೆ ಕರ್ತವ್ಯದ ಅವಧಿ ಎಂದು ಪರಿಗಣನೆ; ಡಿಜಿ ಪ್ರವೀಣ್ ಸೂದ್ ಆದೇಶ
ಇತ್ತೀಚೆಗೆ ಕರ್ತವ್ಯ ನಿರ್ವಹಣೆ ಸಮಯದಲ್ಲಿ ಪೊಲೀಸರು ಸೋಂಕಿತರ ಜೊತೆ ಸಂಪರ್ಕಕ್ಕೆ ಬಂದಿರುತ್ತಾರೆ. ಹೀಗಾಗಿ ಸೋಂಕಿತರ ಜೊತೆ ಸಂಪರ್ಕ ಹೊಂದಿ ಕ್ವಾರಂಟೈನ್ ಆಗುತ್ತಿದ್ದಾರೆ. ಪೊಲೀಸರು ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಇರುವಾಗ ಕರ್ತವ್ಯದ ಅವಧಿ ಎಂದು ಪರಿಗಣನೆ ಮಾಡಬೇಕೆಂದು ಹೇಳಿದ್ದಾರೆ.
ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿ ನಿಮಿತ್ತ ಹೊರರಾಜ್ಯದಿಂದ ಪ್ರಯಾಣ ಬೆಳೆಸಿದ ಸಿಬ್ಬಂದಿಗೆ ಇದು ಅನ್ವಯವಾಗುತ್ತದೆ.