ಕರ್ನಾಟಕ

karnataka

ETV Bharat / state

ರಾಹುಲ್ ಗಾಂಧಿ ರಾಜ್ಯದಿಂದ ಕಣಕ್ಕಿಳಿದರೆ ಸೋಲಿನ ರುಚಿ ತೋರಿಸುತ್ತೇವೆ: ರವಿಕುಮಾರ್ - defeat

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​​ನಿಂದ ರಾಹುಲ್​ ಗಾಂಧಿಯವರು ರಾಜ್ಯದಿಂದ ಸ್ಪರ್ಧಿಸಿದರೆ ಅವರಿಗೆ ನಾವು ಸೋಲಿನ ರುಚಿ ತೋರಿಸುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್​ ಗುಡುಗಿದ್ದಾರೆ.

ರವಿಕುಮಾರ್

By

Published : Mar 16, 2019, 1:28 PM IST

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಸ್ಪರ್ಧೆ ಮಾಡಲಿ ಅವರಿಗೆ ಬಿಜೆಪಿ ಸೋಲಿನ ರುಚಿ ತೋರಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕ್ಷೇತ್ರ ಆಯ್ಕೆ ಮಾಡಿಕೊಂಡ ಬಳಿಕ ಅವರ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿ ಯಾರು ಎಂದು ಬಿಜೆಪಿ ಘೋಷಿಸಲಿದೆ. ಮೊದಲು ರಾಜ್ಯದಲ್ಲಿ ಅವರ ಸ್ಪರ್ಧೆ ಖಚಿತವಾಗಲಿದೆ ಎಂದರು.

ರವಿಕುಮಾರ್

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಜಾಗವಿಲ್ಲ. ಕಾಂಗ್ರೆಸ್​ಗೆ ಕೇವಲ 2 ಸ್ಥಾನ ಕೊಡುವುದಾಗಿ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಹೇಳಿದ್ದಾರೆ. ಇದರಿಂದಲೇ ರಾಹುಲ್ ಗಾಂಧಿ ಉತ್ತರ ಪ್ರದೇಶದಿಂದ ಕರ್ನಾಟಕದ ಕಡೆಗೆ ವಲಸೆ ಬರುವಂತಾಗಿದೆ. ಇದು ಇಡೀ ಉತ್ತರ ಭಾರತದಲ್ಲಿ ಬಿಜೆಪಿ ಜಯಭೇರಿ ಭಾರಿಸುತ್ತದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದರು.

ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಮಂಡ್ಯದಲ್ಲಿ ಸುಮಲತಾ ಅವರನ್ನು ಬೆಂಬಲಿಸುವ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ನಿರ್ಧಾರ ಹೊರ ಬೀಳಲಿದೆ. ಒಟ್ಟಿನಲ್ಲಿ ಮಂಡ್ಯದ ವಂಶಪಾರಂಪರ್ಯ ಅಧಿಪತ್ಯ ಹಾಗೂ ಹಾಸನದ ಕಣ್ಣೀರ ಕೋಡಿಗೆ ಈ ಬಾರಿ ಚುನಾವಣೆಯಲ್ಲಿ ಕರ್ನಾಟಕದ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಬಿಜೆಪಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲೋದು ನಿಶ್ಚಿತ. ಇದರಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣವಿದೆ. ಮೋದಿ ಸರ್ಕಾರದ ಸಾಧನೆ, ಅಮಿತ್ ಶಾ, ಯಡಿಯೂರಪ್ಪ ನೇತೃತ್ವದಲ್ಲಿ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details