ಬೆಂಗಳೂರು: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಅಬಕಾರಿ ಇಲಾಖೆ 21 ಲೀಟರ್ ಮದ್ಯವನ್ನು ಸೀಜ್ ಮಾಡಿದ್ದಾರೆ.
ಅಕ್ರಮ ಮದ್ಯ ಮಾರಾಟ : ಇಬ್ಬರ ಬಂಧನ.. 21 ಲೀಟರ್ ಮದ್ಯ ಸೀಜ್ - ಪ್ರತ್ಯೇಕ ಪ್ರಕರಣ
ಬೆಂಗಳೂರಿನಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದ್ದು, ಅವರ ಬಳಿಯ 21 ಲೀಟರ್ ಮದ್ಯ ಸೀಜ್ ಮಾಡಲಾಗಿದೆ.
ಅಕ್ರಮ ಮದ್ಯ ವಶ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳು ದೇವನಹಳ್ಳಿಯಲ್ಲಿ ರಸ್ತೆ ಕಾವಲು ನಡೆಸಿದ ವೇಳೆ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಎನ್. ಮೂರ್ತಿ ಎಂಬ ವ್ಯಕ್ತಿಯನ್ನು ಬಂಧಿಸಿ, ಸುಮಾರು 8 ಲೀಟರ್ ಮದ್ಯ ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹಾಗೇ ನೆಲಮಂಗಲ ತಾಲೂಕಿನ ನರಸೀಪುರ ಗ್ರಾಮದ ಪೆಟ್ಟಿಗೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನುಅಬಕಾರಿ ಇಲಾಖೆ ಅಧಿಕಾರಿಗಳು ದಾಳಿಯ ವೇಳೆ ಬಂಧಿಸಿ ಸುಮಾರು 14 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.