ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಲೈವ್ ಬ್ಯಾಂಡ್ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 75 ಮಹಿಳೆಯರನ್ನು ರಕ್ಷಿಸಿ, 15 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಅನಧಿಕೃತ ಲೈವ್ ಬ್ಯಾಂಡ್ ಮೇಲೆ ಸಿಸಿಬಿ ದಾಳಿ: 75 ಮಹಿಳೆಯರ ರಕ್ಷಣೆ, 15 ಆರೋಪಿಗಳ ಬಂಧನ - bengaluru bengaluru ccb police raid on Illegal live band
ಬೆಂಗಳೂರಿನ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಲೈವ್ ಬ್ಯಾಂಡ್ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 75 ಮಹಿಳೆಯರನ್ನು ರಕ್ಷಿಸಿದ್ದಾರೆ.
ಅಶೋಕ್ ನಗರ ಠಾಣೆ, ಕಲಾಸಿಪಾಳ್ಯ ಠಾಣೆ ಮತ್ತು ಕಾಟನ್ ಪೇಟೆ ಠಾಣೆಯ ವ್ಯಾಪ್ತಿಯಲ್ಲಿ ಒಟ್ಟು ಮೂರು ಕಡೆ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ ಅವ್ಯಹಾರ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಡಿಸಿಪಿ ಕುಲ್ದೀಪ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.
ಬಂಧಿತರು ಅನಧಿಕೃತವಾಗಿ ಲೈವ್ ಬ್ಯಾಂಡ್ ನಡೆಸುತ್ತಿರುವುದು, ಮಹಿಳೆಯರಿಂದ ಡ್ಯಾನ್ಸ್ ಮಾಡಿಸಿ ಗಿರಾಕಿಗಳಿಂದ ಹಣ ಪಡೆಯುತ್ತಿರುವುದು ಕಂಡುಬಂದಿದೆ ಎಂದು ಹೇಳಲಾಗ್ತಿದೆ. ಲೈವ್ ಬ್ಯಾಂಡ್ನಲ್ಲಿದ್ದ ಮಹಿಳೆಯರನ್ನು ರಕ್ಷಿಸಿ ನಗದು, ಕೆಲ ದಾಖಲಾತಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.