ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಮಾರಾಟ ಮತ್ತು ಬೆಳೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಕೆಐಎಎಲ್ ಮತ್ತು ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಕ್ರಮ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ - ಅಕ್ರಮ ಗಾಂಜಾ ವಶ ಪ್ರಕರಣ
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಮಾರಾಟ ಮತ್ತು ಗಾಂಜಾ ಬೆಳೆಯುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಕೆಐಎಎಲ್ ಮತ್ತು ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಿಡ್ಲಘಟ್ಟ ಮೂಲದ ಭೀಮಯ್ಯ, ಚಿಕ್ಕಜಾಲ ಮೂಲದ ಆಂಜನಮ್ಮ (40) ಬಂಧಿತ ಆರೋಪಿಗಳು. ಭೀಮಯ್ಯ ದೇವನಹಳ್ಳಿ ಕನ್ನಮಂಗಲ ಬಳಿ ಮಾರಾಟ ಮಾಡುತ್ತಿದ್ದ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿ, ಸುಮಾರು 2 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಜಾಲ ಬಳಿಯ ಸರ್ಕಾರಿ ರಾಜಕಾಲುವೆಯಲ್ಲಿ ಆಂಜನಮ್ಮ ಹಲವು ದಿನಗಳಿಂದ 12 ಗಾಂಜಾ ಗಿಡಗಳನ್ನು ಬೆಳೆಸಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಿಕ್ಕಜಾಲ ಪೊಲೀಸರು 40 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಎಸಿಪಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಚಿಕ್ಕಜಾಲ ಇನ್ಸ್ಪೆಕ್ಟರ್ ಮುತ್ತುರಾಜ್ ಹಾಗೂ ಕೆಐಎಎಲ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.