ಬೆಂಗಳೂರು:ಕೊರೊನಾ ಬಿಕ್ಕಟ್ಟು ನಡುವೆಯೂ ಕಾಳಸಂತೆಯಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಮೂರು ಕಡೆಗಳಲ್ಲಿ ಉತ್ತರ ವಿಭಾಗದ ಪೊಲೀಸರು ದಾಳಿ ನಡೆಸಿ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಜನಾರ್ಧನ್, ದೀಪಕ್, ಲೋಕೇಶ್, ಜಾನಿ, ದಿನೇಶ್ ಹಾಗೂ ಶಂಕರ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳೆಲ್ಲ ಖಾಸಗಿ ಆಸ್ಪತ್ರೆಯಲ್ಲಿ ಮೆಡಿಕಲ್ ರೀಪ್ರಸೆಂಟೆಟಿವ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಬಂಧಿತರಿಂದ 10ಕ್ಕಿಂತ ಅಧಿಕ ರೆಮ್ಡೆಸಿವಿರ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ನಗರ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಲಭ್ಯವಾಗುವ ಕೊರೊನಾ ಜೀವ ರಕ್ಷಕ ರೆಮ್ಡೆಸಿವಿರ್ ಚುಚ್ಚುಮದ್ದು ಒಂದಕ್ಕೆ ಸಾವಿರಾರು ರೂ.ನಂತೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದರು ಎನ್ನಲಾಗಿದೆ.