ದೇವನಹಳ್ಳಿ: ಬ್ಯಾಕ್ಪ್ಯಾಕ್ನ ಚಕ್ರದಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಣಿಕೆ ಮಾಡುತ್ತಿದ್ದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಆರೋಪಿಯಿಂದ 7 ಲಕ್ಷ ಮೌಲ್ಯದ 142 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.
ಸೆಪ್ಟೆಂಬರ್ 23ರಂದು ದುಬೈನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನನ್ನು ಸಂಶಯದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಣಿಕೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.