ಕರ್ನಾಟಕ

karnataka

ETV Bharat / state

ಮಾಗಡಿ ರಸ್ತೆಯಲ್ಲಿ ಮಾದಕ ವಸ್ತುಗಳ ಮಾರಾಟ : ಓರ್ವನ ಬಂಧನ - ಮಾಗಡಿ ರಸ್ತೆಯಲ್ಲಿ ಮಾದಕ ವಸ್ತುಗಳ ಮಾರಾಟ

ಮಾಗಡಿ ರಸ್ತೆಯಲ್ಲಿ ವ್ಯಕ್ತಿಯೋರ್ವ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದನು. ಈ ಕುರಿತಂತೆ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..

Police arrested accused
ಮಾದಕ ವಸ್ತು ಮಾರುತ್ತಿದ್ದ ವ್ಯಕ್ತಿಯ ಬಂಧನ

By

Published : Jul 18, 2021, 3:03 PM IST

ಬೆಂಗಳೂರು :ಮಾಗಡಿ ರೋಡ್​ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸುಖದೇವ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಬಂಧಿತನಿಂದ 1 ಕೆಜಿ 84 ಗ್ರಾಂ ಅಫೀಮು, 1 ಮೊಬೈಲ್​​ ಫೋನ್, 9 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ. ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ರಾಜಾಜಿನಗರ ಬಳಿಯ ಇರುವ ಮಾಗಡಿ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯಿಂದ ವಶಕ್ಕೆ ಪಡೆದಿರುವ ವಸ್ತುಗಳು

ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ :ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರು ಮಾಗಡಿ ರಸ್ತೆಯಲ್ಲಿರುವ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಬಗೆಗೆ ಮಾಹಿತಿ ನೀಡಿದ್ದರು. ಈ ಸಂಬಂಧ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೆ.ನಂಜುಂಡೇಗೌಡ ಅವರ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳ ರಚಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದರು.

ಓದಿ: ಉಪ್ಪಿನಂಗಡಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ!

ಪೊಲೀಸ್ ತಂಡಕ್ಕೆ ಮಾಗಡಿ ರಸ್ತೆಯಲ್ಲಿ ವ್ಯಕ್ತಿಯೋರ್ವ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬುದರ ಕುರಿತಂತೆ ಮಾಹಿತಿ ದೊರೆಯಿತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ.

ABOUT THE AUTHOR

...view details