ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಮನ್ಸೂರ್ ಖಾನ್ನನ್ನು ಇಡಿ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್ನನ್ನು ಇಡಿ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ
ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ್ ಖಾನ್ನನ್ನು ಇಡಿ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಐಎಂಎ ವಂಚನೆ ಪ್ರಕರಣ
ಈ ಹಿಂದೆ ಮನ್ಸೂರ್ ಖಾನ್ನನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಮನ್ಸೂರ್ ವಿಚಾರಣೆಯನ್ನು ಅರ್ಧಕ್ಕೆ ಕೈ ಬಿಡಲಾಗಿತ್ತು. ನಂತರ ಆತನನ್ನು ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ಬಹುಕೋಟಿ ವಂವನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲು ನ್ಯಾಯಾಲಯದ ಅನುಮತಿ ಪಡೆದು ಮನ್ಸೂರ್ ಖಾನ್ನನ್ನು ಇಡಿ ಮತ್ತೊಮ್ಮೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಮತ್ತೊಂದೆಡೆ ಪ್ರಮುಖ ರಾಜಾಕಾರಣಿಗಳು, ಐಪಿಎಸ್ ಅಧಿಕಾರಿಗಳು, ಉದ್ಯಮಿಗಳ ವಿಚಾರಣೆಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.