ಕರ್ನಾಟಕ

karnataka

ETV Bharat / state

ಮನ್ಸೂರ್​ಗೆ ಐಪಿಎಸ್​​ ಅಧಿಕಾರಿ ಸಹಾಯ ಮಾಡಿದ ಆರೋಪ: ಎಸ್ಐಟಿಗೆ ಮನವಿ ಸಲ್ಲಿಸಲು ಕೋರ್ಟ್​ ಸೂಚನೆ - ಎಸ್ಐಟಿ

ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ತನಿಖೆಯಿಂದ ತಪ್ಪಿಸಿಕೊಳ್ಳಲು ಐಪಿಎಸ್ ಅಧಿಕಾರಿ ಸಹಕಾರ ನೀಡಿದ್ದಾರೆಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಐಎಂಎ ಹಗರಣ

By

Published : Aug 13, 2019, 7:03 PM IST

ಬೆಂಗಳೂರು:ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ತನಿಖೆಯಿಂದ ತಪ್ಪಿಸಿಕೊಳ್ಳಲು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಕಾರಣವೆಂದು ಆರೋಪಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎಸ್ಐಟಿ ತನಿಖಾಧಿಕಾರಿಗಳ ಬಳಿ ತನಿಖೆಗೆ ಮನವಿ ಸಲ್ಲಿಸಲುಅರ್ಜಿದಾರರಿಗೆ ಸೂಚಿಸಿದೆ.

ಆದರ್ಶ್ ಆರ್. ಅಯ್ಯರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ರು. ಇದರ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ಮುಖ್ಯ ನ್ಯಾಯಮೂರ್ತಿ, ಈಗಾಗ್ಲೇ ತನಿಖೆಯನ್ನ ಎಸ್ಐಟಿ ನಡೆಸುತ್ತಿದೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ಅವ್ರ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖಾಧಿಕಾರಿಗಳಿಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಲು ಅರ್ಜಿದಾರರಿಗೆ ಸೂಚನೆ ನೀಡಿ ಅರ್ಜಿ ಇತ್ಯರ್ಥಗೊಳಿಸಿದೆ.

ಅರ್ಜಿಯಲ್ಲೇನಿದೆ?

ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಮನ್ಸೂರ್​ಗೆ ಸಹಾಯ ಮಾಡಿದ್ದಾರೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ವಿರುದ್ಧ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಕೆ ಮಾಡಿದ್ರು.

ABOUT THE AUTHOR

...view details