ಮಾಜಿ ಸಚಿವ ರೋಷನ್ ಬೇಗ್ಗೆ 14 ದಿನ ನ್ಯಾಯಾಂಗ ಬಂಧನ - IMA SCAM: 14 days judicial custody for EX minister roshan baig
17:06 December 02
ಸಿಬಿಐ ವಿಶೇಷ ಕೋರ್ಟ್ ನಿಂದ ಆದೇಶ
ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ಗೆ ಮತ್ತೇ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣದ 36ನೇ ಆರೋಪಿ ರೋಷನ್ ಬೇಗ್ಗೆ ಸಿಬಿಐ ವಿಶೇಷ ಕೋರ್ಟ್ ಮತ್ತೇ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ ಸಿಬಿಐ ವಶಕ್ಕೆ ಪಡೆದಿತ್ತು. ವಿಚಾರಣೆ ಬಳಿಕ ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಈ ಆದೇಶ ನೀಡಲಾಗಿದೆ.
ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಬಳಿ ಅಕ್ರಮವಾಗಿ ಹಣ ಪಡೆದ ಆರೋಪದಡಿ ರೋಷನ್ ಬೇಗ್ ಬಂಧನವಾಗಿದೆ.