ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿಯವರೆಗೆ ಮೊಬೈಲ್ ಟ್ಯಾಂಕರ್, ಕಲ್ಯಾಣಿ, ಹೊಂಡಗಳಲ್ಲಿ ಒಟ್ಟು 1,59,980 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಪಾಲಿಕೆ ತಿಳಿಸಿದೆ.
ನಗರ ವ್ಯಾಪ್ತಿಯಲ್ಲಿ ವಲಯವಾರು ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಒಪಿ) ಗಣೇಶ ಮೂರ್ತಿಗಳ ಕುರಿತು ಪಾಲಿಕೆ ಮಾಹಿತಿ ನೀಡಿದ್ದು, ಪಶ್ಚಿಮ ವಲಯ ವ್ಯಾಪ್ತಿಯಲ್ಲಿ 34,471 ಮಣ್ಣಿನ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿದ್ದರೆ, 306 ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದೆ.
ದಕ್ಷಿಣ ವಲಯದಲ್ಲಿ ಅತಿ ಹೆಚ್ಚು 68,521 ಮಣ್ಣಿನ ಗಣೇಶ ಮೂರ್ತಿ ಮತ್ತು 11,402 ಪಿಒಪಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ದಾಸರಹಳ್ಳಿ ವಲಯದಲ್ಲಿ 1,382 ಮಣ್ಣಿನ ಗಣೇಶ ಮೂರ್ತಿಗಳನ್ನು, 22 ಪಿಒಪಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಿದೆ.